ಕ್ರೈಂ

ಏಳನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ..! ಕಾರಣ ಏನು ಗೊತ್ತಾ?

242
Spread the love

ಜೈಪುರ: ರಾಜಸ್ಥಾನದ ಚುರು ಜಿಲ್ಲೆಯ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಅಲ್ಲದೆ ಶಾಲೆಯ ಮಾನ್ಯತೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಏನಿದು ಪ್ರಕರಣ?

13 ವರ್ಷದ ಮೃತ ವಿದ್ಯಾರ್ಥಿ ಗಣೇಶ್, ಖಾಸಗಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಹೋಂ ವರ್ಕ್ ಪೂರ್ಣಗೊಳಿಸಿಲ್ಲವೆಂದು ಶಿಕ್ಷಕರು ಆತನ ಮೇಲೆ ತೀವ್ರವಾಗಿ ಥಳಿಸಿದ್ದಾರೆ ಎಂದು ಸಲಸಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು ಎಂದು ವಿಷ್ಣೋಯ್ ಹೇಳಿದ್ದಾರೆ. ಆರೋಪಿ ಶಿಕ್ಷಕ ಮನೋಜ್ (35) ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ಅವರು ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ಮುಗಿಯುವವರೆಗೂ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ದೋಟಸ್ರಾ ಟ್ವೀಟ್ ಮಾಡಿದ್ದಾರೆ.

See also  ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಗ್ರಾಮದ ಐವರ ಕೊಲೆ
  Ad Widget   Ad Widget   Ad Widget