ಕ್ರೈಂದೇಶ-ವಿದೇಶರಾಜ್ಯವೈರಲ್ ನ್ಯೂಸ್

ಶಿಕ್ಷಕನ ಮೊಬೈಲ್ ​​ನಲ್ಲಿ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳ ಫೋಟೋ..! ಸರ್ಕಾರಿ ಶಾಲಾ ಶಿಕ್ಷಕ ಮೊಹಮ್ಮದ್​ ಸಾದಿಕ್ ಬಂಧನ

77
Spread the love

ನ್ಯೂಸ್ ನಾಟೌಟ್: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿದ್ದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಮೊಹಮ್ಮದ್​ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ ಎಂದು ವರದಿ ತಿಳಿಸಿದೆ.

ಮೊಹಮ್ಮದ್​ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರದಿದ್ದಾನೆ. ಅಲ್ಲದೇ, ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಶಿಕ್ಷಕ ಮೊಹಮ್ಮದ್​ ಸಾದಿಕ್ ಬೆದರಿಸುತ್ತಿದ್ದನು. ಈ ಫೋಟೋಗಳನ್ನು ತನ್ನ ಮೊಬೈಲ್​ನಲ್ಲಿ ಸೇವ್​​ ಮಾಡಿಕೊಂಡಿದ್ದನು ಎನ್ನಲಾಗಿದೆ.

ಶಿಕ್ಷಕ ಮೊಹಮ್ಮದ್​ ಸಾದಿಕ್ ಕಳೆದ ಒಂದು ವರ್ಷದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಓರ್ವ ವಿದ್ಯಾರ್ಥಿನಿ ತಾಯಿಯ ಮುಂದೆ ದೌರ್ಜನ್ಯದ ಬಗ್ಗೆ ಹೇಳಿದಾಗ, ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಮೊಹಮ್ಮದ್​ ಸಾದಿಕ್ ​ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಂಧಿತ ಶಿಕ್ಷಕ ಮೊಹಮ್ಮದ್​ ಸಾದಿಕ್ ಮೊಬೈಲ್​ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳು ಕೂಡ ಪತ್ತೆಯಾಗಿವೆ.
ಶಿಕ್ಷಕ ಮೊಹಮ್ಮದ್​ ಸಾದಿಕ್ ​ವಿದ್ಯಾರ್ಥಿನಿಯರ ಅಂಗಾಂಗಗಳನ್ನ ಮುಟ್ಟುತ್ತಿದ್ದನು. ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ಖಾಸಗಿ ಅಂಗಾಂಗಳ ಫೋಟೊ ತೆಗೆದುಕೊಂಡು ಬಾ ಅಂತ ಹೇಳುತ್ತಿದ್ದನು ಎಂದು ವಿದ್ಯಾರ್ಥಿನಿಯರ ಹೇಳಿಕೆಯಿಂದ ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.

ಆರೋಪಿಯ ಮೊಬೈಲ್ ಕೂಡ ಸೀಜ್ ಮಾಡಿದ್ದೇವೆ. ಮೊಬೈಲ್​ನಲ್ಲಿನ ಕೆಲ ಫೋಟೊಗಳು ಡಿಲೀಟ್ ಆಗಿದ್ದು ಎಫ್‌ಎಸ್‌ಎಲ್​ಗೆ ಕಳುಹಿಸುತ್ತೇವೆ. ಸುಮಾರು ವಿದ್ಯಾರ್ಥಿನಿಯರು ಆತನ ವಿರುದ್ಧ ಹೇಳಿಕೆ ಕೊಟ್ಟಿದ್ದಾರೆ. ಪೋಕ್ಸೊ ಕಾಯ್ದೆಯಡಿ ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Click

https://newsnotout.com/2024/09/darshan-and-wilson-guarden-naga-kannada-news-viral-news-ccb-police-raid/
https://newsnotout.com/2024/09/doctors-and-kolkatta-case-police-officer-under-arrest-by-cbi-viral-news/
https://newsnotout.com/2024/09/munirathna-case-caste-and-threat-issue-kannada-news-2-days-police-custody/
https://newsnotout.com/2024/09/wife-for-sale-to-repay-the-loan-amount-kannada-news-police-arrested/
https://newsnotout.com/2024/09/cm-siddaramayya-viral-security-issue-news-kannada-vidhana-sowdha/
See also  ಪಾಕಿಸ್ತಾನದಲ್ಲಿ ಮೊದಲ ಹಿಂದೂ ಪೊಲೀಸ್‌ ವರಿಷ್ಠಾಧಿಕಾರಿಯ ನೇಮಕ..! ರಾಜೇಂದರ್ ಮೇಘವಾರ್ ಎಂಬವರ ಸಾಧನೆಗೆ ಮೆಚ್ಚುಗೆ
  Ad Widget   Ad Widget   Ad Widget   Ad Widget   Ad Widget   Ad Widget