ಸುಳ್ಯ

ಸುಳ್ಯ: ಶಾರದ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

185
Yellow Background

ನ್ಯೂಸ್‌ ನಾಟೌಟ್‌: ಸುಳ್ಯದ ಶ್ರೀ ಶಾರದ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಿದರು.

Yellow Background

ಸಮಾರಂಭದಲ್ಲಿ ಡಾ. ರಾಧಾಕೃಷ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ದಯಾಮಣಿ ಕೆ. ವಹಿಸಿದ್ದರು. ಉಪನ್ಯಾಸಕಿ ಸ್ವರ್ಣಕಲಾ ಎ.ಎಸ್ ಅವರು ಶಿಕ್ಷಕರ ದಿನಾಚರಣೆ ಬಗ್ಗೆ ಮಾತನಾಡಿದರು. ವಿದ್ಯಾರ್ಥಿನಿಯರಾದ ಶ್ರಾವ್ಯ ಪ್ರಾರ್ಥಿಸಿ, ದ್ರವ್ಯ ಸ್ವಾಗತಿಸಿದರು. ಸೋನಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಉಪನ್ಯಾಸಕ ವೃಂದದವರಿಂದ ಮನೋರಂಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೃತಿಕಾ ಬಾಳುಗೋಡು ವಂದಿಸಿದರು.

See also  ಸುಳ್ಯ: NMC ಕಾಲೇಜಿನ ಸಮಾಜ ಕಾರ್ಯ ವಿಭಾಗದ ವತಿಯಿಂದ ಕೌಶಲ್ಯ ತರಬೇತಿ ಸರಣಿ ಕಾರ್ಯಕ್ರಮ, ಉಪ್ಪಿನಕಾಯಿ ತಯಾರಿ, ಬ್ಯಾಗ್ ತಯಾರಿಕೆ, ಕೇಶ ವಿನ್ಯಾಸದಂತಹ ಹತ್ತು ಹಲವು ತರಬೇತಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget