ಕ್ರೀಡೆ/ಸಿನಿಮಾಕ್ರೈಂದೇಶ-ವಿದೇಶಬೆಂಗಳೂರುರಾಜ್ಯವೈರಲ್ ನ್ಯೂಸ್

ಟೀಮ್​ ಇಂಡಿಯಾದ ಮಾಜಿ ಆಟಗಾರ ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆ..! ಸಂತಾಪ ಸೂಚಿಸಿದ ಅನಿಲ್ ಕುಂಬ್ಳೆ

159

ನ್ಯೂಸ್ ನಾಟೌಟ್ : ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ಡೇವಿಡ್ ಜಾನ್ಸನ್(52) ಮಾನಸಿಕ ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಜೂ.20) ಸಂಭವಿಸಿದೆ. ಬೆಂಗಳೂರಿನ ಕೊತ್ತನೂರು(Kothanur) ಬಳಿ ಇರುವ ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಅರಸಿಕೆರೆ ಮೂಲದ ಡೇವಿಡ್ ಜಾನ್ಸನ್(David Jude Johnson) 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್​ರೌಂಡರ್​ ಆಗಿದ್ದ ಅವರು ಟೆಸ್ಟ್​ನಲ್ಲಿ 8 ರನ್​ ಮತ್ತು 3 ವಿಕೆಟ್​ ಕಿತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಅವರಿಗೆ ಭಾರತ ಪರ ಕೊನೆಯ ಪಂದ್ಯವಾಗಿತ್ತು.

ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರರಿಲ್ಲ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. 1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಇತ್ತೀಚೆಗೆ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

Click 👇

https://newsnotout.com/2024/06/darshan-and-vijayalakshmi-court-issue-stay-order-against-media
https://newsnotout.com/2024/06/real-hero-mahesh-babu-helps-poor-family-and-taken-for-granted
https://newsnotout.com/2024/06/polcie-subinspector-case-and-suspended-from-service-and-arrested
https://newsnotout.com/2024/06/ramayana-stage-play-fine-due-to-misleading-content-and-parts
https://newsnotout.com/2024/06/alchohol-kannada-news-tamil-nadu-case-25-people-nomore
See also  ಭಾರತ ಹಾಕಿ ತಂಡದ ಟೋಕಿಯೋ ಒಲಿಂಪಿಕ್ಸ್ ಸಾಧನೆ ಹಿಂದಿರುವವರು ಒಬ್ಬರು ಮುಖ್ಯಮಂತ್ರಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget