ಕ್ರೀಡೆ/ಸಿನಿಮಾ

ಟೀಂ ಇಂಡಿಯಾಕ್ಕೆ ರಾಹುಲ್ ದ್ರಾವಿಡ್ ಮುಖ್ಯ ಕೋಚ್

223
Spread the love

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕರ್ನಾಟಕದ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.

ಹಾಲಿ ಕೋಚ್ ರವಿ ಶಾಸ್ತ್ರಿ ಅವರ ಅವಧಿ ಮುಕ್ತಾಯವಾದ ಬಳಿಕ ದ್ರಾವಿಡ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಎನ್ನಲಾಗಿದೆ.ಆದರೆ, ಕೋಚ್ ನೇಮಕ ವಿಚಾರವಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಟಿ20 ವಿಶ್ವಕಪ್ ಟೂರ್ನಿಯೊಂದಿಗೆ ಮುಖ್ಯ ಕೋಚ್ ಆಗಿ ರವಿ ಶಾಸ್ತ್ರಿ ಅವಧಿ ಮುಕ್ತಾಯಗೊಳ್ಳಲಿದೆ. ಬಳಿಕ ನವೆಂಬರ್ನಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ಸರಣಿ ನಡೆಯಲಿದ್ದು, ಕೋಚ್ ಆಗಿ ದ್ರಾವಿಡ್ ಅವರು ತಂಡವನ್ನು ಸೇರಿಕೊಳ್ಳಲಿರುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗಿದೆ.

See also  ಸೆಲ್ಫಿ ಕೇಳಿ ನಟಿಯ ಸೊಂಟ ಮುಟ್ಟಿದ ವ್ಯಕ್ತಿ..! ಇಲ್ಲಿದೆ ನಟಿ ಕಾಜಲ್ ವೈರಲ್‌ ವಿಡಿಯೊ..!
  Ad Widget   Ad Widget   Ad Widget