Uncategorized

ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ

ನ್ಯೂಸ್ ನಾಟೌಟ್: ಶಾಲೆಗೆ ತಡವಾಗಿ ಬರುವ ಮಕ್ಕಳಿಗೆ ಶಿಕ್ಷಕರು ಗದರುವುದನ್ನು, ಎರಡೇಟು ಬಿಗಿಯುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲರೊಬ್ಬರು ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಮಹಂಗು ಖೇರಾ ಸರಕಾರಿ ಶಾಲೆಯಲ್ಲಿ ಶಿಕ್ಷಕಿ ಶಾಲೆಗೆ ೧೦ ನಿಮಿಷ ತಡವಾಗಿ ಬಂದಿದ್ದಕ್ಕೆ ಪ್ರಾಂಶುಪಾಲ ಶಿಕ್ಷಕಿಗೆ ಬೂಟಿನಿಂದ ಹೊಡೆದಿದ್ದಾರೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿ ಶಾಲೆಗೆ ತಡವಾಗಿ ಬಂದಿದ್ದರಿಂದ ಕುಪಿತಗೊಂಡ ಪ್ರಾಂಶುಪಾಲ ಮೊದಲು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವೇಳೆ ಶಿಕ್ಷಕಿ ಮತ್ತು ಪ್ರಾಂಶುಪಾಲನ ನಡುವೆ ವಾಗ್ವಾದ ನಡೆದಿದ್ದು ನೋಡನೋಡುತ್ತಲೇ ಪ್ರಾಂಶುಪಾಲ ಶೂಗಳಿಂದ ಅವರನ್ನು ಥಳಿಸಿದ್ದಾರೆ. ೨೦ ಸೆಕೆಂಡುಗಳ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೊವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಈ ಘಟನೆ ಕುರಿತು ಪ್ರಾಂಶಪಾಲರ ಮೇಲೆ ಶಿಕ್ಷಕಿ ಸ್ಥಳೀಯ ಠಾಣೆಗೆ ದೂರು ನೀಡಿದ್ದು, ಸದ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಂಶುಪಾಲನನ್ನು ಸೇವೆಯಿಂದ ಅಮಾನತು ಮಾಡಿ ತನಿಖೆಗೆ ಆದೇಶಿಸಿದ್ದಾರೆ ಎನ್ನಲಾಗಿದೆ.

Related posts

ತಮಿಳುನಾಡಿನಲ್ಲಿ ವೇಗವಾಗಿ ಹರಡುತ್ತಿದೆ ಒಮಿಕ್ರಾನ್​

ಅಮರ ಸುಳ್ಯ ಸಂಗ್ರಾಮ ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ

ಹಾಸನ ಸಂಸದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಅನರ್ಹವಾಗುವುದರ ಹಿಂದಿದೆ 7 ಕಾರಣ..! ಯಾವುದೆಲ್ಲ ಏಳು ಕಾರಣ..? ಇಲ್ಲಿದೆ ಫುಲ್ ಡಿಟೇಲ್ಸ್