ದೇಶ-ವಿದೇಶ

‘ಕೇಸರಿ ಬಟ್ಟೆ ಏಕೆ ಹಾಕಿಕೊಂಡು ಬಂದ್ರಿ’ ಅಂತ ಗದರಿದ ಪ್ರಾಂಶುಪಾಲ, ಸಿಟ್ಟಿಗೆದ್ದ ಹಿಂದೂ ಕಾರ್ಯಕರ್ತರಿಂದ ತೆರೆಸಾ ಶಾಲೆ ಮೇಲೆ ದಾಳಿ

ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಹಿಜಾಬ್ ಗಲಾಟೆ ರಾಜ್ಯದಲ್ಲಿ ಭಾರಿ ತಾರಕಕ್ಕೇರಿರುವುದು ಎಲ್ಲರಿಗೂ ಗೊತ್ತಿದೆ. ಕರ್ನಾಟಕದ ಈ ಗಲಾಟೆ ರಾಷ್ಟ್ರ ಮಟ್ಟದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ತೆಲಂಗಾಣದಲ್ಲಿ ಶಾಲಾ ವಿದ್ಯಾರ್ಥಿಗಳು ಕೇಸರಿ ಬಟ್ಟೆ ಹಾಕಿ ಬಂದಿದ್ದಕ್ಕೆ ಪ್ರಾಂಶುಪಾಲ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಈ ವಿಚಾರ ಭಾರಿ ಗಲಾಟೆಗೆ ಕಾರಣವಾಗಿದೆ. ಹಿಂದೂ ಕಾರ್ಯಕರ್ತರು ಶಾಲೆಯ ಮೇಲೆ ದಾಳಿ ಮಾಡಿದ್ದಾರೆ. ಶಾಲೆ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ.

ಕನ್ನೆಪಳ್ಳಿ ಎಂಬ ಗ್ರಾಮದಲ್ಲಿರುವ ಬ್ಲೆಸ್ಡ್ ಮದರ್‌ ತೆರೆಸಾ ಹೈ ಸ್ಕೂಲ್‌ನಲ್ಲಿ ಕೆಲ ದಿನಗಳಿಂದ ವಿದ್ಯಾರ್ಥಿಗಳು ಕೇಸರಿ ಬಟ್ಟೆ ಧರಿಸಿ ತರಗತಿಗಳಿಗೆ ಆಗಮಿಸಿದ್ದಾರೆ. ಇದೇ ವೇಳೆ, ಶಾಲೆಯ ಪ್ರಾಂಶುಪಾಲ, ಕೇರಳದ ಮೂಲದ ಜೈಮೊನ್‌ ಜೋಸೆಫ್‌ ಅವರು ವಿದ್ಯಾರ್ಥಿಗಳ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಮ್ಮ ತಂದೆ-ತಾಯಿಯನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ಗದರಿದ್ದಾರೆ. ಹನುಮಾನ್‌ ದೀಕ್ಷೆ ಇರುವ ಕಾರಣ 21 ದಿನ ಕೇಸರಿ ಬಟ್ಟೆ ಧರಿಸುವುದು ಸಂಪ್ರದಾಯ ಎಂದರೂ ಕೇಳದೆ ಪ್ರಾಂಶುಪಾಲ ಗದರಿದ್ದಾರೆ.

https://twitter.com/VikasKA01/status/1780656944551989260
ಶಾಲೆಯಲ್ಲಿ ಯಾವಾಗ ವಿದ್ಯಾರ್ಥಿಗಳು ಕೇಸರಿ ಬಟ್ಟೆ ಹಾಕಿಕೊಂಡು ಬಂದಿದ್ದಕ್ಕೆ ಪ್ರಾಂಶುಪಾಲ ಆಕ್ಷೇಪ ವ್ಯಕ್ತಪಡಿಸಿದ ಸುದ್ದಿ ಹರಡಿತೋ, ಹಿಂದು ಸಂಘಟನೆಗಳ ಕಾರ್ಯಕರ್ತರು ಶಾಲೆಯ ಮೇಲೆ ದಾಳಿ ನಡೆಸಿದ್ದಾರೆ. ಶಾಲೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಲ್ಲದೆ, ಕಿಟಕಿಯ ಗಾಜುಗಳನ್ನೂ ಒಡೆದು ಹಾಕಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ವಿಡಿಯೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದೆಡೆ, ಪರಿಸ್ಥಿತಿ ನಿಯಂತ್ರಿಸಲು ಸ್ಥಳಕ್ಕೆ ಆಗಮಿಸಿದ ಪೊಲೀಸ್‌ ಸಿಬ್ಬಂದಿ ಜತೆಗೂ ಹಿಂದು ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ.


ಕೇಸರಿ ಉಡುಪು ಧರಿಸಿ ಬರಬೇಡಿ ಎಂಬುದಾಗಿ ಶಾಲೆಯ ಆಡಳಿತ ಮಂಡಳಿ ಆಗ್ರಹಿಸಿದ ಹಿನ್ನೆಲೆಯಲ್ಲಿ ಶಾಲೆಯ ಇಬ್ಬರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳ ಪೋಷಕರು ನೀಡಿದ ದೂರಿನ ಮೇರೆಗೆ ಇಬ್ಬರು ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಎರಡು ಸಮುದಾಯಗಳ ಮಧ್ಯೆ ವೈಷಮ್ಯ ಬಿತ್ತಿರುವುದು ಸೇರಿ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಾಂಶುಪಾಲರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಹಿಂದು ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Related posts

ರೇವಣ್ಣ ಬಂಧನ ಹಿನ್ನೆಲೆ ಸ್ವಕ್ಷೇತ್ರದಲ್ಲಿ ಇಂದು(ಫೆ.5) ಜೆಡಿಎಸ್ ಪ್ರತಿಭಟನೆ..! ಕಿಡ್ನ್ಯಾಪ್ ಆಗಿದ್ದ ಮಹಿಳೆಗೆ ಕೌನ್ಸಿಲಿಂಗ್

Prajwal Revanna: ಪ್ರಜ್ವಲ್ ರೇವಣ್ಣ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್‌ ದೂರು..! ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನೀಡಿದ ದೂರಿನಲ್ಲೇನಿದೆ..?

ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ ಎಂದ ಪಾಕ್‌ ಮುಖಂಡ, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಭಾರತದ ಗುಣಗಾನ