ರಾಜ್ಯವೈರಲ್ ನ್ಯೂಸ್ಸಿನಿಮಾ

ಮನೆ ಮುಂದೆ ಪುನೀತ್ ರಾಜ್ ಕುಮಾರ್ ಗಾಗಿ ದೇವಸ್ಥಾನ ಕಟ್ಟಿಸಿದ ಅಭಿಮಾನಿ..! ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ನ್ಯೂಸ್ ನಾಟೌಟ್ : ದಿವಂಗತ ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅಭಿಮಾನಿಯೊಬ್ಬ ತನ್ನ ಮನೆ ಮುಂದೆ ನಿರ್ಮಿಸಿರುವ ದೇವಸ್ಥಾನವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಸೆ.26 ರಂದು ಉದ್ಘಾಟಸಿದರು.

ಹಾವೇರಿಯ ಯಲಗಚ್ಚ ಗ್ರಾಮದಲ್ಲಿ ಈ ದೇವಸ್ಥಾನ ಕಟ್ಟಲಾಗಿದೆ. ಉದ್ಘಾಟನೆಗೆ ಬಂದಿದ್ದ ಅಶ್ವಿನಿಯವರನ್ನು ಗ್ರಾಮದ ಪ್ರಮುಖ ರಸ್ತೆಯಲ್ಲಿ ಕುಂಬಮೇಳದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ದೊಡ್ಮನೆ ಸೊಸೆ, ದಿ.ಪುನೀತ್ ರಾಜಕುಮಾರ್ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ 6 ಅಡಿ ಎತ್ತರದ ಅಪ್ಪು ಮೂರ್ತಿಯನ್ನು ಲೋಕಾರ್ಪಣೆ ಮಾಡಿದರು.

ಅಪ್ಪುವಿನ ಅಪ್ಪಟ ಅಭಿಮಾನಿ ಯಲಗಚ್ಚ ಗ್ರಾಮದ ಪ್ರಕಾಶ ಮೊರಬದ ತಮ್ಮ ಮನೆಯ ಸ್ವಂತ ಜಾಗದಲ್ಲಿ ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ್ ದೇವಸ್ಥಾನ ನಿರ್ಮಿಸಿದ್ದಾರೆ. ಅಪ್ಪು ಮೂರ್ತಿಯನ್ನು ನೋಡಿದ ಅಶ್ವಿನಿ ಭಾವುಕರಾದರು. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

Related posts

ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, ಇಂದಿನಿಂದ(ಎ.21) 2 ದಿನ ವ್ಯಾಪಕ ಮಳೆ ಸಾಧ್ಯತೆ

ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಯುವ ರೈತರ ಮನವಿ! ಅಷ್ಟಕ್ಕೂ ಪತ್ರದಲ್ಲೇನಿದೆ..?

ದರ್ಶನ್ ​ಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎಂದ ವೈದ್ಯರು..! ಜೈಲಿನಲ್ಲಿ ಪೊಲೀಸರಿಗೆ ತಲೆನೋವಾದ ದರ್ಶನ್ ಬೆನ್ನುನೋವು..!