ನ್ಯೂಸ್ ನಾಟೌಟ್: ದೇವರ ದರ್ಶನಕ್ಕೆಂದು ಬರುತ್ತಿದ್ದ ಯುವಕನೊಬ್ಬ ಚಾರ್ಮಾಡಿ ಘಾಟಿ ಪರಿಸರದಲ್ಲಿ ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.
ಮೃತ ಯುವಕನನ್ನು ಬೆಂಗಳೂರಿನ ಪೀಣ್ಯದ (28) ವಿನಯ್ ಎಂದು ಗುರುತಿಸಲಾಗಿದೆ. ಎದೆನೋವು ಕಾಣಿಸಿಕೊಂಡ ಕೂಡಲೇ ಸ್ನೇಹಿತರಾದ ಜೇಂಕಾರ್ ಮತ್ತು ವರದರಾಜು ಅವರು ವಿನಯ್ ನನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸುತ್ತಾರೆ.
ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಹೃದಯಾಘಾತದಿಂದ ಸಾವಿಗೀಡಾಗಿರುವುದಾಗಿ ತಿಳಿದು ಬಂದಿದೆ.