ದೇಶ-ವಿದೇಶ

ಪ್ರಧಾನಿ ಮೋದಿ ಮೂರು ದಿನಗಳ ಫ್ರಾನ್ಸ್ ಪ್ರವಾಸ:ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರ ದಾಳಿ

350
Spread the love

ನ್ಯೂಸ್‌ ನಾಟೌಟ್‌ : ನರೇಂದ್ರ ಮೋದಿ ಅವರು ಮೂರು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಫ್ರಾನ್ಸ್‌ನ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಮಂಗಳವಾರ ಆತ್ಮೀಯವಾಗಿ ಬರಮಾಡಿಕೊಂಡಿದ್ದರು.

ಈ ನಡುವೆ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿಯೊಬ್ಬನಿಂದ ಕರೆ ಬಂದಿದೆ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ಗೆ ತೆರಳುವ ಸಂದರ್ಭ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ನಡೆಸಬಹುದು ಎಂದು ಅಪರಿಚಿತನೊಬ್ಬ ಕರೆ ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಲಾದ ಪೋಸ್ಟ್ ಟ್ವಿಟ್ಟರ್ ನಲ್ಲಿ ಹರಿದಾಡಿದೆ.

ಇದಕ್ಕೆ ಸಂಬಂಧ ಪಟ್ಟ ಹಾಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಜತೆಗೆ, ಇತರ ಏಜೆನ್ಸಿಗಳಿಗೂ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.ಪ್ಯಾರಿಸ್‌ನಲ್ಲಿ ಮಂಗಳವಾರ ನಡೆದ ‘ಎಐ ಆ್ಯಕ್ಷನ್‌’ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಫ್ರಾನ್ಸ್‌ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್‌ ಅವರೊಂದಿಗೆ ಸಹ ಅಧ್ಯಕ್ಷತೆ ವಹಿಸಿದ್ದರು.

See also  ‘ಕಣ್ಮಣಿ ಅನ್ಬೋಡು’ ಹಾಡು ಅನಧಿಕೃತವಾಗಿ ಬಳಸಿದ್ದಕ್ಕೆ 2 ಕೋಟಿ ರೂ. ಡಿಮ್ಯಾಂಡ್ ಮಾಡಿದ ಇಳಯರಾಜ..! 60 ಲಕ್ಷ ರೂ. ನೀಡಿದ ‘ಮಂಜುಮ್ಮೆಲ್ ಬಾಯ್ಸ್’..!
  Ad Widget   Ad Widget   Ad Widget   Ad Widget