ಕರಾವಳಿಕ್ರೈಂ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿದೇಶದಲ್ಲಿ ಅಡಗಿ ಕುಳಿತ್ತಿದ್ದ ಆರೋಪಿ ಕೊನೆಗೂ ಬಂಧನ

ನ್ಯೂಸ್‌ ನಾಟೌಟ್‌: ಮಂಗಳೂರು ಗ್ರಾಮೀಣ ಭಾಗದಲ್ಲಿ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ, ಪೊಲೀಸರಿಗೂ ಸಿಗದೆ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ. ಆದ್ದರಿಂದ ಮಂಗಳೂರು ಗ್ರಾಮಾಂತರ ಪೊಲೀಸರು ಈತನ ವಿರುದ್ಧ ಲುಕ್ ಔಟ್ ನೋಟೀಸ್ ಹೊರಡಿಸಿದ್ದರು.

ಅಕ್ಟೋಬರ್ 14ರಂದು ಈತ ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರಲು ಮುಂಬೈಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ಮುಂಬೈನ ಇಮಿಗ್ರೇಷನ್ ಅಧಿಕಾರಿಗಳು ಈತನ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿರುವ ಬಗ್ಗೆ ಖಚಿತಪಡಿಸಿ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.

Related posts

ಫ್ಯಾಟ್ ಆಗಿದ್ದ ಸ್ಪಂದನಾ 10 ಕೆಜಿ ತೂಕ ಇಳಿಸಿಕೊಂಡಿದ್ದೇಗೆ? ತೆಳ್ಳಗಾಗಲು ಪರ್ಯಾಯ ಚಿಕಿತ್ಸೆ ಮೊರೆ ಹೋಗಿದ್ರಾ ನಟಿ?

ಸುಳ್ಯದ ಹೆಸರಾಂತ ವಸ್ತ್ರಮಳಿಗೆ ಕುಂ..ಕುಂ.. ಫ್ಯಾಶನ್ ನಲ್ಲಿ ಬಿಗ್ ಸೇಲ್ ಆಫರ್ ..! ಸ್ಕ್ರಾಚ್ ಕಾರ್ಡ್ ನಲ್ಲಿ ಗೆದ್ದವರಿಗೆ ಬಹುಮಾನ ಹಸ್ತಾಂತರ;ಗ್ರಾಹಕರಿಗೆ ಸುವರ್ಣಾವಕಾಶ..!ಮುಂದಿನ ವರ್ಷ ನಡೆಯುವ ಸುಳ್ಯ ಜಾತ್ರೆಯವರೆಗೂ ಆಫರ್ ಮುಂದುವರಿಕೆ

ಪುತ್ತೂರು:ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರ್ಜರಿ ಮತಬೇಟೆ