ಕರಾವಳಿ

ಆ ಒಂದು ಕಾರಣಕ್ಕೆ ಮೂವರು ಯುವತಿಯರಿಗೆ ಆ್ಯಸಿಡ್ ಎರಚಿದ ಪಾಪಿ..! ಪೊಲೀಸರ ತನಿಖೆಯಲ್ಲಿ ಕಂಡು ಬಂದಿದ್ದೇನು..?

ನ್ಯೂಸ್ ನಾಟೌಟ್ : ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಹೆಚ್ಚಿನ ಮಾಹಿತಿ ಲಭ್ಯವಾಗಿದೆ.ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 4 ರಂದು ಬೆಳಗ್ಗೆ ನಡೆದ ಘಟನೆ ಬೆನ್ನಲ್ಲೇ ಅಬಿನ್ ಅನ್ನುವ 23 ವರ್ಷದ ಯುವಕನನ್ನು ಬಂಧಿಸಲಾಗಿದ್ದು,ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿದ್ದಾರೆಂದು ತಿಳಿದು ಬಂದಿದೆ.ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಸೈನ್ಸ್‌ ಓದುತ್ತಿದ್ದಳು ಎಂದು ತಿಳಿದು ಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಹಾಗೂ ತನಿಖೆಯ ಪ್ರಗತಿಯನ್ನು ಮುಂದಕ್ಕೆ ನೀಡಲಾಗುವುದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿ ಆ್ಯಸಿಡ್ ದಾಳಿ ಮಾಡಿದ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 4 ರಂದು ಬೆಳಗ್ಗೆ ನಡೆದಿತ್ತು.ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ.ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 4 ರಂದು ಬೆಳಗ್ಗೆ ಘಟನೆ ನಡೆದ ಬೆನ್ನಲ್ಲೇ ಅಬಿನ್ ಅನ್ನುವ 23 ವರ್ಷದ ಯುವಕನನ್ನು ಬಂಧಿಸಲಾಗಿದೆ.ಕೇರಳ ಮೂಲದ ಅಭಿನ್ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ. ಮೂವರು ವಿದ್ಯಾರ್ಥಿನಿಯರು ಕೂಡ ಕಡಬ ಮೂಲದವರು ಎಂದು ತಿಳಿದು ಬಂದಿದೆ. ಓರ್ವ ಹುಡುಗಿಯ ಮುಖಕ್ಕೆ ಗಂಭೀರವಾಗಿ ಗಾಯವಾಗಿದೆ. ಇನ್ನಿಬ್ಬರು ಹುಡುಗಿಯರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

Related posts

ಪೇರಡ್ಕ: ಉರೂಸ್ ಸಮಾರಂಭದ ಧ್ವಜಾರೋಹಣ

ನೆಲ್ಯಾಡಿ: ಕಿವಿ ಕೇಳಿಸದ ಮಾತು ಬಾರದ ವ್ಯಕ್ತಿಗೆ ತಂಡದಿಂದ ಥಳಿತ, ಪುತ್ತೂರು ಆಸ್ಪತ್ರೆಗೆ ದಾಖಲು

ಪ್ರತಿ ದಿನ ಸುಬ್ರಹ್ಮಣ್ಯಕ್ಕೆ ಬರಲಿದೆ ಪ್ಯಾಸೆಂಜರ್ ರೈಲು, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾದ ಸಂಸದ ನಳಿನ್‌ ಕುಮಾರ್‌ ಹೇಳಿದ್ದೇನು..?