ಕರಾವಳಿಸುಳ್ಯ

ದ. ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ರಾಧಾಕೃಷ್ಣ ಬೊಳ್ಳೂರು ಆಯ್ಕೆ

ನ್ಯೂಸ್‌ ನಾಟೌಟ್‌ :ಯುವ ನಾಯಕ , ದಕ್ಷಿಣ ಕನ್ನಡದ ಬಹು ಸಂಖ್ಯಾತ ಸಮುದಾಯಕ್ಕೆ ಸೇರಿದ ಕಿರಣ್ ಗೌಡ ಬುಡ್ಲೆಗುತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿದ್ದಾರೆ. ಅಂತೆಯೇ ಕಾರ್ಯದರ್ಶಿಯಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿದ್ದ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕ ಮಾಡಲಾಗಿದೆ.

ಕಿರಣ್ ಬುಡ್ಲೆಗುತ್ತು ಅವರು ಕಳೆದ 23 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಜೊತೆ ನಂಟು ಬೆಸೆದುಕೊಂಡು ಹಲವಾರು ನಾಯಕತ್ವಗಳನ್ನು, ಹೋರಾಟಗಳನ್ನು ವಹಿಸಿಕೊಂಡು ಬಂದಿದ್ದಾರೆ.ಮಂಗಳೂರು ಲೋಕಸಭಾ ಎಂಪಿ ಅಭ್ಯರ್ಥಿಯ ಪಟ್ಟಿಯಲ್ಲಿಯೂ ಇವರ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ಹಲವು ಸಮಾಜಗಳ ಮತ್ತು ಸಂಘಟನೆಗಳ ಜತೆ ನಿಕಟ ಸಂಪರ್ಕ ಇಟ್ಟುಕೊಂಡಿರುವ ಕಿರಣ್ ಗೌಡ ಬುಡ್ಲೆ ಗುತ್ತು ಹುಟ್ಟು ಸಂಘಟಕ, ಸೈಲೆಂಟ್ ಕೆಲಸಗಾರ.

ಇನ್ನು ರಾಧಾಕೃಷ್ಣ ಬೊಳ್ಳೂರು ಅವರು ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾಧ್ಯಕ್ಷರಾಗಿದ್ದರು. ಬಳಿಕ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕೆಲವು ತಿಂಗಳುಗಳ ಹಿಂದೆ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆ ಗೊಂಡರು.

Related posts

ನಂದಿನಿ ಹಾಲಿನ ದರ ಲೀಟರ್ ಗೆ 2 ರೂ. ಏರಿಕೆ..! ದರ ಏರಿಕೆ ಮಾಡುತ್ತಿಲ್ಲ ಲೀಟರ್ ಅಲ್ಲಿ 50ML ಹೆಚ್ಚಿಗೆ ಕೊಡುತ್ತಿದ್ದೇವೆ ಎಂದ ಕೆ.ಎಂ.ಎಫ್ ಅಧ್ಯಕ್ಷ..! ತೈಲ ದರ ಏರಿಕೆಯ ಬೆನ್ನಲ್ಲೇ ಮತ್ತೊಂದು ಶಾಕ್..!

ಸುಳ್ಯಕ್ಕೆ ಬರುತ್ತಿದ್ದ ಕಾರು ಬಂದಡ್ಕ ಕಾಡಿನ ಮಧ್ಯೆ ಪಲ್ಟಿ..! ರಕ್ಷಣೆಗಾಗಿ ಕೆಲ ಹೊತ್ತು ಪರದಾಡಿದ ಪ್ರಯಾಣಿಕರು..!

ಸುಳ್ಯ: ತಡರಾತ್ರಿ ಆಂಬ್ಯುಲೆನ್ಸ್ ಗೆ ಅಡ್ಡ ಬಂದ ಕಾಡುಕೋಣ, ಚಾಲಕನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಸಿಕ್ಕಿದ್ದೇಗೆ..?