ಕರಾವಳಿ

ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಎಗರಿಸಿದ ಖತರ್ನಾಕ್ ಕಳ್ಳ..!ಆಸ್ಪತ್ರೆಯಲ್ಲಿನ ರೋಗಿಗಳೇ ಈತನ ಟಾರ್ಗೆಟ್..!ಯಾರೀತ ವಿಚಿತ್ರ ಕಳ್ಳ?

ನ್ಯೂಸ್ ನಾಟೌಟ್ :ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಖತರ್ನಾಕ್ ಕಳ್ಳನೊಬ್ಬ ಎಗರಿಸಿದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದಿಂದಾಗಿ ಸೆ.17 ರಂದು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಬಳಿಕ ಅವರು ಸೆ.19 ರಂದು ಜನರಲ್ ವಾರ್ಡ್ ಗೆ ಶಿಫ್ಟ್ ಆಗಿದ್ದರು. ಇವರು ಮಲಗಿದ್ದ ವೇಳೆ ಬೆಡ್ ಪಕ್ಕದಲ್ಲಿ ಟೇಬಲ್ ಮೇಲೆ ಇರಿಸಲಾಗಿದ್ದ ಆಂಡ್ರಾಯ್ಡ್ ಮೊಬೈಲ್ ಹಾಗೂ ಕೀ ಪ್ಯಾಡ್ ಮೊಬೈಲ್ ಫೋನ್ ನ್ನು ಕಳ್ಳನೊಬ್ಬ ಎಗರಿಸಿದ್ದಾನೆ.ಮೊಬೈಲ್ ಕಳ್ಳತನ ಮಾಡಿದ ಮತ್ತು ಆತ ಆಸ್ಪತ್ರೆಗೆ ಬಂದು ಹೋದ ಬಗೆಗಿನ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.

ಈತ ಕಳೆದ ವಾರವೂ ಕಳ್ಳತನ ಮಾಡಿದ್ದ ಎಂದು ತಿಳಿದು ಬಂದಿದೆ. ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋಗಿ ಮೊಬೈಲ್ ಸಮೇತ ಎಸ್ಕೇಪ್ ಆಗಿದ್ದ. ಇದೀಗ ಆತನೇ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳ್ಳತನ ಮಾಡಿದ್ದು ಈತನ ಓಡಾಟದ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ.

ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಚಹರೆಯನ್ನು ಗಮನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.

ವಿಡಿಯೋ ವೀಕ್ಷಿಸಲು ಈ ಲಿಂಕ್ ಒತ್ತಿ 👇https://www.facebook.com/NewsNotOut2023/videos/746971337194551/?extid=CL-UNK-UNK-UNK-AN_GK0T-GK1C&mibextid=NnVzG8

Related posts

ಮಂಗಳೂರು: ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ

ಕಡಬ: ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ..! ಮೂವರು ವಿದ್ಯಾರ್ಥಿನಿಯರು ಗಂಭೀರ..!

ಗ್ರಾಹಕರಿಗೊಂದು ಸಂತಸದ ಸುದ್ದಿ! , ಸುಳ್ಯದ ಗಾಂಧಿನಗರದಲ್ಲಿರುವ ಅಯೋಧ್ಯಾ ಡ್ರೆಸ್ ಶಾಪ್‌ನಲ್ಲಿ 3 ದಿನಗಳ ಮಾನ್ಸೂನ್ ಸ್ಪೆಷಲ್ ಡಿಸ್ಕೌಂಟ್ ಮೇಳ!