ನ್ಯೂಸ್ ನಾಟೌಟ್ : ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸುರಕ್ಷಿತವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (International Space Station) ಸೇರಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಶುಕ್ಲಾ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು 140 ಕೋಟಿ ಭಾರತೀಯರೂ (Indians) ಕೊಂಡಾಡಿದ್ದಾರೆ.
ಬುಧವಾರ (ಜೂ.25) ಮಧ್ಯಾಹ್ನ 12:03ರ ವೇಳೆಗೆ ಆಕ್ಸಿಯಂ-4 ಮಿಷನ್ ಅಡಿಯಲ್ಲಿ (NASA Axiom 4 Mission) ಉಡಾವಣೆ ಆಗಿದ್ದ ಸ್ಪೇಸ್‌ಎಕ್ಸ್‌ನ ʻಡ್ರ್ಯಾಗನ್ʼ ನೌಕೆ ಗುರುವಾರ (ಜೂ.26) ಸಂಜೆ 4:01 ಗಂಟೆ ವೇಳೆಗೆ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕ್ (ಕೂಡಿಸುವುದು) ಆಯಿತು. ಇದಾದ 2 ಗಂಟೆಗಳ ನಂತರ ಹ್ಯಾಚ್ ತೆರೆಯಿರು. ಬಳಿ ಶುಕ್ಲಾ (Shubhanshu Shukla) ಸೇರಿ ನಾಲ್ವರು ಗಗನಯಾತ್ರಿಗಳು ಐಎಸ್‌ಎಸ್‌ನೊಳಗೆ ಅಧಿಕೃತವಾಗಿ ಪ್ರವೇಶಿಸುವ ಮೂಲಕ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾದರು. ಐಎಸ್‌ಎಸ್ ಪ್ರವೇಶಿಸುತ್ತಿದ್ದಂತೆ ನಿಲ್ದಾಣದ ಸಿಬ್ಬಂದಿ ಪರಸ್ಪರ ಅಪ್ಪಿಕೊಂಡು ಬರಮಾಡಿಕೊಂಡರು.
LIVE: @Axiom_Space‘s #Ax4 mission is scheduled to dock with the @Space_Station at approximately 6:30am ET (1030 UTC). Watch with us as the multinational crew starts their two-week stay aboard the orbiting laboratory. https://t.co/NrThYrmRrN
— NASA (@NASA) June 26, 2025
41 ವರ್ಷದ ಬಳಿಕ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಕಾಶ ಕೇಂದ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ಮೂಲಕ ಬಾಹ್ಯಾಕಾಶವನ್ನು ತಲುಪಿದ 2ನೇ ಭಾರತೀಯ ಎಂಬ ಇತಿಹಾಸ ನಿರ್ಮಿಸಿದ್ದಾರೆ. 1984ರಲ್ಲಿ ಸೋವಿಯತ್ ಕಾರ್ಯಾಚರಣೆಯ ಭಾಗವಾಗಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ಬಾಹ್ಯಾಕಾಶ ಪ್ರಯಾಣ ಬೆಳೆಸಿದ್ದರು. ಇದಾದ 4 ದಶಕಗಳ ನಂತರ, ಗ್ರೂಪ್ ಕ್ಯಾಪ್ಟನ್ ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣಿಸಿರುವ 2ನೇ ಭಾರತೀಯ ಗಗನಯಾತ್ರಿಯಾಗಿದ್ದಾರೆ. ಆದ್ರೆ ಬಾಹ್ಯಾಕಾಶ ನಿಲ್ದಾಣದೊಳಗೆ ಪ್ರವೇಶಿಸಿದ ಮೊದಲ ಭಾರತೀಯ ಶುಕ್ಲಾ ಅವರೇ ಆಗಿದ್ದಾರೆ.