ಕರಾವಳಿಕ್ರೈಂ

ಮನೆಯ ಬೆಡ್ ರೂಂಗೆ ನುಗ್ಗಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಕಳ್ಳ ಬಜಪೆ ಪೊಲೀಸರ ಬಲೆಗೆ..! ಸಿಕ್ಕಿಬಿದ್ದವನಿಂದ ಪೊಲೀಸರು ವಶಪಡಿಸಿಕೊಂಡಿದ್ದೆಷ್ಟು..?

296

ನ್ಯೂಸ್ ನಾಟೌಟ್: ಖತರ್ನಾಕ್ ಕಳ್ಳನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಹಿಳೆಯರ ಕರಿಮಣಿ ಸರ ಸೇರಿದಂತೆ ಚಿನ್ನಾಭರಣ ದೋಚುತ್ತಿದ್ದ ಕಳ್ಳನನ್ನು ಕೊನೆಗೂ ಹೆಡೆಮುರಿ ಕಟ್ಟುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ತಾಲೂಕು ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ಕಡೆಗೆ ಹೋಗುವ ರಸ್ತೆಯಲ್ಲಿರುವ ಕರೋಡಿ ಎಂಬ ಮನೆಯಲ್ಲಿ ಕಳ್ಳತನವಾಗಿತ್ತು. ಸುಮಾರು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮನೆಯವರಿಂದ ಸೆ.೧ರಂದು ದೂರು ದಾಖಲಾಗಿತ್ತು.

ಈ ಸಂಬಂಧಪಟ್ಟಂತೆ ಕಾರ್ಯಾಚರಣೆಗೆ ಇಳಿದಿದ್ದ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ್ ನೇತೃತ್ವದ ತಂಡ ದಾಳಿ ನಡೆಸಿ ತಾರೀಕಂಬ್ಳ ನಿವಾಸಿ ವಿನ್ಸೆಂಟ್ ಡಿ”ಸೋಜಾ (34)ಎಂಬವನನ್ನು ವಶಕ್ಕೆ ಪಡೆದುಕೊಂಡಿದ್ದರು.

ಈ ವೇಳೆ ಆತನಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು (ಚಿನ್ನದ ಕರಿಮಣಿ ಸರ, ಬಿಳಿ ಬಣ್ಣದ ಹರಳುಗಳಿಂದ ಕೂಡಿರುವ ಚಿನ್ನದ ನೆಕ್ಲೆಸ್, ಚಿನ್ನದ ಬಳೆಗಳು-2, ಚಿನ್ನದ ಉಂಗುರಗಳು-3, ಒಂದು ಜೊತೆ ಚಿನ್ನದ ಕಿವಿ ಒಲೆ ಮತ್ತು ಒಂದು ಜೊತೆ ಚಿನ್ನದ ಜುಮುಕಿ) ವಶಪಡಿಸಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಪೊಲೀಸ್ ಆಯುಕ್ತ ಕುಲದೀಪ ಕುಮಾರ್ ಜೈನ್ IPS ಮಾರ್ಗದರ್ಶನದಂತೆ ಡಿ.ಸಿ.ಪಿ ಅಂಶು ಕುಮಾರ್ ಮತ್ತು ಶ್ರೀ ದಿನೇಶ್ ಕುಮಾರ್ ರವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ರವರ ನೇತೃತ್ವದಲ್ಲಿ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ ಅವರು PSI ಗುರಪ್ಪ ಕಾಂತಿ, PSI ರೇವಣ ಸಿದ್ದಪ್ಪ, PSI ಕುಮಾರೇಶನ್, PSI ಲತಾ, ASI ರಾಮ ಪೂಜಾರಿ ಮೇರೆಮಜಲು, ರಶೀದ್ ಶೇಖ್, ಸುಜನ್, ರೋಹಿತ್, ದುರ್ಗಾ ಪ್ರಸಾದ್ ಶೆಟ್ಟಿ, ಸಂತೋಷ್, ಬಸವರಾಜ್ ಪಾಟೀಲ್, ಕೆಂಚನ ಗೌಡ ಮತ್ತು ಇತರ ಸಿಬ್ಬಂದಿ ವರ್ಗದವರು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

See also  ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ಟ್ರಾಫಿಕ್ ಜಾಮ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget