ಕ್ರೈಂಸುಳ್ಯ

ಕನಕಮಜಲು: ತಡರಾತ್ರಿ ಹಿಂಬದಿಯ ಬಾಗಿಲು ಮುರಿದು ಮನೆಗೆ ನುಗ್ಗಿದ ಕಳ್ಳರು, ಮನೆಯಲ್ಲಿದ್ದ ಚಿನ್ನಾಭರಣ ಕಳವು

232

ನ್ಯೂಸ್‌ ನಾಟೌಟ್‌: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಸುಳ್ಯ ತಾಲೂಕಿನ ಕನಕಮಜಲು ಎಂಬಲ್ಲಿ ಭಾನುವಾರ ತಡರಾತ್ರಿ (ಜು.16ರಂದು) ಸಂಭವಿಸಿದೆ.

ಕನಕಮಜಲು ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಎಂಬವರ ಮನೆಯ ಹಿಂಬದಿಯ ಬಾಗಿಲು ಮುರಿದು ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ. ಸಂಬಂಧಿಯೊಬ್ಬರು ನಿಧನರಾದ ಹಿನ್ನೆಲೆಯಲ್ಲಿ ಯುರೇಶ್ ಬುಡ್ಲೆಗುತ್ತು ಮತ್ತು ಕುಟುಂಬದವರು ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯ ಹಿಂಬದಿಯ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.

See also  ಅಂಗನವಾಡಿ ಸಹಾಯಕಿಯ ಗೈರು ಹಾಜರಾತಿ ಸಕ್ರಮಗೊಳಿಸಲು 1ಲಕ್ಷ ರೂ.ಗೆ ಬೇಡಿಕೆ..! ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget