ಕರಾವಳಿಕ್ರೈಂ

ಮಗಳನ್ನು ಮಂಗಳೂರು ಏರ್‌ಪೋರ್ಟ್‌ಗೆ ಬಿಟ್ಟು ಬರಲು ತೆರಳಿದ ಕುಟುಂಬ! ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು!

398

ನ್ಯೂಸ್ ನಾಟೌಟ್: ವಿದೇಶಕ್ಕೆ ತೆರಳಲಿದ್ದ ಮಗಳನ್ನು ಏರ್‌ಪೋರ್ಟ್‌ಗೆ ಬಿಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವೀರಕಂಬದಲ್ಲಿ ಮಾರ್ಚ್ 27ರಂದು ನಡೆದಿದೆ.

ವೀರಕಂಬ ಬೊಣ್ಯಕುಕ್ಕು ಜನತಾ ಕಾಲೋನಿ ನಿವಾಸಿ ಮಹಮ್ಮದ್ ಮುಸ್ಲಿಯಾರ್ ರವರು ಕುಟುಂಬ ಸಮೇತರಾಗಿ ಮಾ.27ರಂದು ರಾತ್ರಿ ವಿದೇಶಕ್ಕೆ ತೆರಳಲಿದ್ದ ಮಗಳನ್ನು ಮಂಗಳೂರು ಏರ್‌ಪೋರ್ಟ್‌ಗೆ ಬಿಟ್ಟು ಬರಲು ತೆರಳಿದ್ದರು. ಇದೇ ಸಮಯಕ್ಕೆ ಕಾದು ಕುಳಿತು ಹೊಂಚು ಹಾಕಿದ ಖದೀಮರು ಮನೆಗೆ ನುಗ್ಗಿ ಲೂಟಿ ಮಾಡಿದ್ದಾರೆ.

ಅವರು ಮರಳಿ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿತ್ತಲ್ಲದೇ ಮನೆಯ ಛಾವಣಿಗೆ ಏಣಿ ಇಟ್ಟು ಮನೆಯೊಳಗೆ ನುಗ್ಗಿ ಕಪಾಟಿನ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಘಟನೆ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

See also  ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ನದಿಗೆ ಬಿದ್ದ ವೃದ್ದೆ,ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ 2ನೇ ಬಲಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget