Latestರಾಜ್ಯಸಿನಿಮಾ

ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗಾಗಿ ಹೈಕೋರ್ಟ್‌ಗೆ ಮೊರೆ ಹೋದ ನಟ ಕಮಲ್ ಹಾಸನ್..! ನಟ ಸಲ್ಲಿಸಿದ ಅರ್ಜಿಯಲ್ಲೇನಿದೆ..?

640

ನ್ಯೂಸ್ ನಾಟೌಟ್ : ‘ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು’ ಎಂದು ಹೇಳಿರುವ ನಟ ಕಮಲ್ ಹಾಸನ್ ತಮ್ಮ ಮೊಂಡಾಟ ಮುಂದುವರಿಸಿದ್ದಾರೆ. ಕನ್ನಡಿಗರ ಕ್ಷಮೆ ಕೇಳಲು ನಿರಾಕರಿಸಿರುವ ಕಮಲ್ ಹಾಸನ್ ತಮ್ಮ ಥಗ್‌ ಲೈಫ್ ಸಿನಿಮಾದ ಪ್ರಮೋಷನ್‌ ಗಾಗಿ ದುಬೈ, ಸಿಂಗಾಪುರಕ್ಕೆ ತೆರಳಿದ್ದಾರೆ.

ಕಮಲ್ ಹಾಸನ್‌ ನ ಥಗ್ ಲೈಫ್ ಸಿನಿಮಾ ಬಿಡುಗಡೆ ವಿರೋಧಿಸಿ ಕನ್ನಡಿಗರು ಹೋರಾಟಕ್ಕೆ ಸಜ್ಜಾಗಿದ್ದಾರೆ. ಈ ನಡುವೆ ನಟ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

“ಕರ್ನಾಟಕದಲ್ಲಿ ತಮ್ಮ ಥಗ್ ಲೈಫ್ ಸಿನಿಮಾ ಬಿಡುಗಡೆ ಹಾಗೂ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಚಿತ್ರ ಪ್ರದರ್ಶನವನ್ನು ತಡೆಯದಂತೆ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸೂಚಿಸಬೇಕು. ಸಿನಿಮಾ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕು” ಎಂದು ನಟ ಕಮಲ್ ಹಾಸನ್ ಮತ್ತು ಸಿನಿಮಾ ನಿರ್ದೇಶಕ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇದೇ ಜೂನ್ 5ಕ್ಕೆ ಕಮಲ್ ಹಾಸನ್ ಅಭಿನಯದ ಥಗ್‌ ಲೈಫ್ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ತಮ್ಮ ಒಡೆತನದ ರಾಜಕಮಲ್ ಫಿಲ್ಮ್ ಇಂಟರ್‌ ನ್ಯಾಷನಲ್‌ ಸಂಸ್ಥೆಯ ಸಿಇಒ ಮೂಲಕ ಕಮಲ್ ಹಾಸನ್ ಈ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕಮಲ್ ಹಾಸನ್ ಸಲ್ಲಿಸಿರುವ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಪುತ್ತೂರು: ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್..! ಬಿಜೆಪಿ ಮುಖಂಡನಿಗೆ ವಿಚಾರಣೆಗೆ ಹಾಜರಾಗಲು ಸೂಚನೆ..!

ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ..! ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ತರುತ್ತಿದ್ದ ವೇಳೆ ಘಟನೆ..!

See also  ಫಸ್ಟ್ ನೈಟ್ ವಿಡಿಯೋ ಮಾಡಿಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್ ​ಮೇಲ್ ಮಾಡಿದ ಸರ್ಕಾರಿ ಅಧಿಕಾರಿ..! ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಗುರುರಾಜ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget