ಕ್ರೈಂದಕ್ಷಿಣ ಕನ್ನಡರಾಜಕೀಯವೈರಲ್ ನ್ಯೂಸ್

Tiger Claw: ಹುಲಿ ಉಗುರಿನ ವಿಚಾರ ನಿಮ್ಮ ವ್ಯಾಪ್ತಿಗೆ ಬರಲ್ಲ, ನಾವು ನಿರ್ಧಾರ ಮಾಡ್ತೀವಿ ಎಂದ ಕೇಂದ್ರ ಸರ್ಕಾರ..! ಈ ಬಗ್ಗೆ ಅರಣ್ಯ ಸಚಿವ ಹೇಳಿದ್ದೇನು..? ಆದೇಶದ ಅವಧಿ ಮುಕ್ತಾಯ

245

ನ್ಯೂಸ್ ನಾಟೌಟ್: ಹುಲಿ ಉಗುರಿನ ವಿಚಾರಕ್ಕೆ ಕೇಂದ್ರದಿಂದ ನಮಗೆ ಸುತ್ತೋಲೆ ಬಂದಿದೆ. ಹುಲಿ ಉಗುರಿನ ವಿಚಾರಕ್ಕೆ ರಾಜ್ಯ ಮಟ್ಟದಲ್ಲಿ ಆದೇಶ ಹೊರಡಿಸಿದ್ದೀರಿ. ಇದು ನಿಮ್ಮ ವ್ಯಾಪ್ತಿಗೆ ಬರಲ್ಲ, ನಾವು ನಿರ್ಧಾರ ಮಾಡ್ತೀವಿ ಎಂದು ಕೇಂದ್ರ ಸರ್ಕಾರ ಹೇಳಿದೆ ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಹೀಗಾಗಿ ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆ ಚರ್ಚೆ ಮಾಡ್ತೇವೆ. ನಮ್ಮ ಆದೇಶದ ಗಡುವು ಮುಗಿದಿದೆ, ಕೆಲವರು ವಾಪಸ್ ತಂದಿದ್ದಾರೆ. ಕಾನೂನು ಇಲಾಖೆ ಜೊತೆಗೆ ಚರ್ಚೆ ಮಾಡಿ ತೀರ್ಮಾ‌ನ ಮಾಡ್ತೇವೆ ಸಚಿವರು ಮಾಹಿತಿ ನೀಡಿದ್ದಾರೆ. ಇನ್ನು ಇದೇ ವೇಳೆ ಸಂಸದ ಡಿ.ಕೆ.ಸುರೇಶ್ ನಿವಾಸದಲ್ಲಿ ಆಯೋಜಿಸಿದ್ದ ಡಿನ್ನರ್ ಮೀಟಿಂಗ್ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರ್ ಖಂಡ್ರೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪರಾಮರ್ಶೆ ನಡೆಯಿತು. ಯಾರು ಯಾವ ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂಬ ಬಗ್ಗೆ ಚರ್ಚೆ ಆಯಿತು. ಬರ ಪರಿಹಾರ, ರೈತರ ಸಮಸ್ಯೆ ಬಗ್ಗೆಯೂ ಚರ್ಚೆ ಮಾಡಿದೆವು ಎಂದು ಹೇಳಿದ್ದಾರೆ.

Click 👇

https://newsnotout.com/2024/05/prajwal-revanna-passport-issue-kannada-news
https://newsnotout.com/2024/05/hindu-muslim-case-court-issue
https://newsnotout.com/2024/05/belthangady-theft-in-house-kannada-news
See also  ಪಾಕಿಸ್ತಾನಕ್ಕೆ ತೆರಳಲು ಸಮಯ ನೀಡುವಂತೆ ಕೋರಿದ್ದ ಅರ್ಜಿಯನ್ನು ವಜಾ ಮಾಡಿದ ಕರ್ನಾಟಕ ಹೈಕೋರ್ಟ್, ಮಾನವೀಯತೆ ತೋರಿದ್ದಕ್ಕೆ ಈಗ ಅನುಭವಿಸುತ್ತಿದ್ದೇವೆ ಎಂದ ನ್ಯಾಯಾಧೀಶರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget