ಶಿಕ್ಷಣ

5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ; ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆಗಳ ಅಂತಿಮ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 13ರಿಂದ 5 ಮತ್ತು 8ನೇ ತರಗತಿಯ ಪರೀಕ್ಷೆಗಳು ಆರಂಭಗೊಳ್ಳಲಿವೆ ಎಂದು ಮಾಹಿತಿ ತಿಳಿಸಿದೆ.

ದಿನಾಂಕ 06-03-2023 ಸೋಮವಾರದಿಂದ ದಿನಾಂಕ 10-03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ಮಾರ್ಚ್‌ನಲ್ಲಿ 5ನೇ ತರಗತಿ ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. 2 ಗಂಟೆಯ ಅವಧಿಗೆ 50 ಅಂಕಗಳನ್ನು ನಿಗಧಿ ಮಾಡಲಾಗಿದೆ. ಅದರಲ್ಲಿ 40 ಅಂಕ ಲಿಖಿತ ಮತ್ತು 10 ಅಂಕ ಮೌಖಿಕ ಪರೀಕ್ಷೆ ನಡೆಯಲಿದೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಅಡಿಯಲ್ಲಿ ಪ್ರಶ್ನೆಗಳನ್ನು ಸಿದ್ಧಪಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಹೀಗಿವೆ:

ಸೋಮವಾರ: ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಇಂಗ್ಲೀಷ್( ಎನ್ ಸಿ ಆರ್ ಟಿ ), ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು ಮತ್ತು ಸಂಸ್ಕೃತ

ಮಂಗಳವಾರ: ದ್ವಿತೀಯ ಭಾಷೆ – ಇಂಗ್ಲೀಷ್ ಮತ್ತು ಕನ್ನಡ

ಬುಧವಾರ: 5ನೇ ತರಗತಿ ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು.

8ನೇ ತರಗತಿ ತೃತೀಯ ಭಾಷೆ – ಹಿಂದಿ, ಹಿಂದಿ ( ಎನ್ ಸಿ ಆರ್ ಟಿ ), ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ ಮತ್ತು ತುಳು.

ಗುರುವಾರ: 5ನೇ ತರಗತಿ ಕೋರ್ ವಿಷಯ – ಗಣಿತ, 8ನೇ ತರಗತಿ ಕೋರ್ ವಿಷಯ – ಗಣಿತ.

ಶುಕ್ರವಾರ: 5ನೇ ತರಗತಿ ಕೋರ್ ವಿಷಯ ಪರಿಸರ ಅಧ್ಯಯನ. 8ನೇ ತರಗತಿ ಕೋರ್ ವಿಷಯ ವಿಜ್ಞಾನ.

ಶನಿವಾರ: 5ನೇ ತರಗತಿ ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ. 8ನೇ ತರಗತಿ ಕೋರ್ ವಿಷಯ ಸಮಾಜ ವಿಜ್ಞಾನ.

ಶಾಲಾವಾರು ವಿದ್ಯಾರ್ಥಿಗಳ ಸಂಖ್ಯೆಯನ್ನಾಧರಿಸಿ 5ನೇ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಒಂದು ಕೇಂದ್ರದಲ್ಲಿ ಲಭ್ಯವಾಗುವಂತೆ, ಶಾಲಾವಾರು ವಿದ್ಯಾರ್ಥಿಗಳು ಕಡಿಮೆ ಇದ್ದಲ್ಲಿ ಎರಡು ಕಿ.ಮೀ. ವ್ಯಾಪ್ತಿಯ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಸಮೀಪದ ಕಿರಿಯ / ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳೂ ಸೇರಿದಂತೆ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುವುದು.

8 ನೇ ತರಗತಿ ಪರೀಕ್ಷಾ ಕೇಂದ್ರವನ್ನು ಕನಿಷ್ಠ 50 ವಿದ್ಯಾರ್ಥಿಗಳು ಇರುವಂತೆ ಆಯಾ ಹಿರಿಯ ಪ್ರಾಥಮಿಕ/ ಪ್ರೌಢಶಾಲೆಗಳಲ್ಲಿ ಸ್ಥಾಪಿಸುವುದು. ಹಿರಿಯ ಪ್ರಾಥಮಿಕ/ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಕನಿಷ್ಠ ಎರಡು ಕಿ.ಮೀ ವ್ಯಾಪ್ತಿಯ ಸಮೀಪದ ಶಾಲೆಗಳಿಗೆ ಟ್ಯಾಗ್ ಮಾಡುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

Related posts

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಮತ್ತೊಂದು ಹೆಮ್ಮೆಯ ಗರಿ, ಇಲ್ಲಿ ಶಿಕ್ಷಕಿ ತರಬೇತಿ ಪಡೆದವರೆಲ್ಲ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಆಯ್ಕೆ, ಯಾರು ಎಲ್ಲಿಗೆ ಆಯ್ಕೆ..? ಇಲ್ಲಿದೆ ಡಿಟೇಲ್ಸ್

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ 26 ಗ್ರೇಸ್‌ ಮಾರ್ಕ್ಸ್! ಏನಿದು ಹೊಸ ನಿಯಮ!

ಕೆವಿಜಿ ಕ್ಯಾಂಪಸ್ ನಲ್ಲಿ ಅದ್ದೂರಿ ಗಣೇಶೋತ್ಸವಕ್ಕೆ ಕ್ಷಣಗಣನೆ, ಬೆಳಗ್ಗೆ ಪ್ರತಿಷ್ಠಾಪನೆ ಸಂಜೆ ವಿಸರ್ಜನೆ