ಕ್ರೈಂದೇಶ-ವಿದೇಶವೈರಲ್ ನ್ಯೂಸ್

ತಿರುಪತಿಯಲ್ಲಿ ಬಾಂಬ್ ಬೆದರಿಕೆ! ರಾತ್ರಿ 10 ಗಂಟೆಯಿಂದ 2 ಗಂಟೆಯವರೆಗೆ ಪೊಲೀಸರಿಂದ ತೀವ್ರ ಶೋಧ ಕಾರ್ಯ..!

226

ನ್ಯೂಸ್ ನಾಟೌಟ್ : ಕಳೆದ ಕೆಲ ದಿನಗಳಿಂದ ವಿಮಾನಗಳಲ್ಲಿ ಬಾಂಬ್ ಇಟ್ಟಿರುವ ಬೆದರಿಕೆ ಪ್ರಕರಣಗಳು ಪದೇ ಪದೇ ಹೆಚ್ಚಾಗುತ್ತಿದ್ದು, ವಿಮಾನ ಸಂಚಾರಗಳಲ್ಲಿ ಅಡಚಣೆ ಉಂಟಾಗಿ ಪ್ರಯಾಣಿಕರಿಗೂ ತೊಂದರೆಯಾಗುತ್ತಿತ್ತು. ಆದರೆ ಈ ಬಾರಿ ವಿಶ್ವಪ್ರಸಿದ್ಧ ತಿರುಪತಿ ದೇಗುಲದ ಹತ್ತಿರದ ಹೊಟೇಲ್ ಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಕೇಳಿ ಬಂದಿದೆ.

ಆಂಧ್ರಪ್ರದೇಶದ ತಿರುಪತಿಯಲ್ಲಿ ಬಾಂಬ್ ಇರುವ ಬಗ್ಗೆ ಆಘಾತಕಾರಿ ದೂರು ಕೇಳಿ ಬಂದಿದ್ದು, ಈ ಬೆದರಿಕೆ ಬಂದ ನಂತರ ರಾಜ್ಯ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ದೇಗುಲ ಸಮೀಪದ ಹೋಟೆಲ್‌ ನಲ್ಲಿ ಬಾಂಬ್ ಇರಿಸಿರುವ ಬಗ್ಗೆ ಕರೆ ಮತ್ತು ಇಮೇಲ್ ಮೂಲಕ ಮಾಹಿತಿ ಬಂದಿತ್ತು. ತಿರುಪತಿ ಪೊಲೀಸರು ನಗರದ ಹೋಟೆಲ್‌ ಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ.

ಈ ಬೆದರಿಕೆಯ ಇಮೇಲ್‌ ನಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಬಂಧಿಸಲಾದ ಡ್ರಗ್ ಕಿಂಗ್‌ಪಿನ್ ಜಾಫರ್ ಸಿದ್ದಿಕ್ ಹೆಸರು ಕೂಡ ಇದೆ ಎಂದು ಹೇಳಲಾಗುತ್ತಿದೆ. ತಿರುಪತಿ ಪೂರ್ವ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ ಪೆಕ್ಟರ್ ಶ್ರೀನಿವಾಸುಲು ಬಾಂಬ್ ಬೆದರಿಕೆಯ ಘಟನೆಯನ್ನು ದೃಢಪಡಿಸಿದ್ದಾರೆ ಮತ್ತು ಈ ಬೆದರಿಕೆಗಳಿಗೆ ಕಾರಣರಾದವರನ್ನು ಗುರುತಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಇನ್ಸ್‌ಪೆಕ್ಟರ್ ಶ್ರೀನಿವಾಸುಲು ತಿಳಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಗುರುವಾರ (24 ಅಕ್ಟೋಬರ್ 2024) ರಾತ್ರಿ 10 ರಿಂದ ಬೆಳಗಿನ ಜಾವ 2 ಗಂಟೆಯವರೆಗೆ ವಿವಿಧ ಹೋಟೆಲ್‌ ಗಳಲ್ಲಿ ಶೋಧ ನಡೆಸಿತ್ತು. ಲೀಲಾಮಹಾಲ್ ಬಳಿ ಮೂರು ಹೋಟೆಲ್‌ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಸದ್ಯ ಬೆದರಿಕೆ ಕರೆಗಳ ವಿವರಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಿರತರಾಗಿದ್ದಾರೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Click

https://newsnotout.com/2024/10/storm-kannada-news-viral-news-5-84-lakh-people-d-replaced/
https://newsnotout.com/2024/10/lawyer-jagadeesh-kannada-news-viral-news-bigboss-house/
https://newsnotout.com/2024/10/traffic-police-kannada-news-viral-news-car-issue-viral-video-shivamogga/
https://newsnotout.com/2024/10/indian-army-attacked-by-kannada-news-viral-news-4-are-nomore/
https://newsnotout.com/2024/10/kannada-news-darshan-and-mobile-case-revealed-viral-nenws-hf/
See also  ಮಂಗಳೂರು: ಕನ್ನಡ ಕಲಿಯುವಂತೆ ರೈಲ್ವೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದ ಕೇಂದ್ರ ಸಚಿವ..! ನಾನು ಚಿಕ್ಕವನಿದ್ದಾಗ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಜೈಲು ಪಾಲಾಗಿದ್ದೆ ಎಂದ ವಿ.ಸೋಮಣ್ಣ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget