ನ್ಯೂಸ್ ನಾಟೌಟ್: ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡುಪ್ರಸಾದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಉತ್ತರಾಖಂಡನ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಪೊಮಿಲ್ ಜೈನ್, ಪೂನಂಬಾಕ್ಕಂನ ವೈಷ್ಣವಿ ಡೈರಿ ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ, ದುಂಡಿಗಲ್ ನ ಎಆರ್ ಡೈರಿ ಎಂಡಿ ರಾಜಶೇಖರನ್ ಬಂಧಿತ ಆರೋಪಿಗಳು.
ಟೆಂಡರ್ ಪಡೆಯುವ ಹಂತದಿಂದ ಪೂರೈಕೆ ತನಕ ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿಗಳು ತುಪ್ಪ ಪೂರೈಕೆಯ ನೆಪದಲ್ಲಿ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ದೃಢವಾಗಿದೆ. ವೈಷ್ಣವಿ ಡೈರಿ, ಎಆರ್ ಡೈರಿ ಹೆಸರಿರುವ ಸುಳ್ಳು ದಾಖಲೆಗಳು ಮತ್ತು ಸೀಲುಗಳನ್ನು ಬಳಸಿ ಟೆಂಡರ್ ಪಡೆದಿದೆ ಎನ್ನಲಾಗಿದೆ. ಹೀಗಾಗಿ ತುಪ್ಪದ ಟೆಂಡರ್ ಪಡೆಯಲು ನಕಲಿ ದಾಖಲೆಗಳು, ಸೀಲ್ ಬಳಕೆ ಮಾಡಿದ್ದಾರೆ. ದಾಖಲೆಗಳನ್ನು ತಿರುಚಲಾಗಿರುವುದು, ಅಲ್ಲದೇ ತುಪ್ಪ ಪೂರೈಕೆಯಲ್ಲಿಯೂ ವ್ಯತ್ಯಾಸ ನಡೆದಿರುವ ಕಾರಣಕ್ಕೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಘಟನೆ ಬಳಿಕ ಟಿಟಿಡಿಯು ಕರ್ನಾಟಕದ ಕೆಎಂಎಫ್ ನಿಂದ ತುಪ್ಪ ಮರುಖರೀದಿಗೆ ಮುಂದಾಗಿತ್ತು.
Click
ಕೊಡಗಿನ ಕಾಫಿ ಎಸ್ಟೇಟ್ ನಲ್ಲಿ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ..! ಮಂಗಳೂರಿನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ