ದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ತಿರುಪತಿ: ಹಿಂದೂಯೇತರ ಧಾರ್ಮಿಕ ಆಚರಣೆಗಳನ್ನು ಅನುಸರಿಸಿದ 18 ಸಿಬ್ಬಂದಿ ವಿರುದ್ಧ ಕ್ರಮ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ತಿರುಮಲ ತಿರುಪತಿಯಲ್ಲಿ ಕೆಲಸ ಮಾಡುವ ವೇಳೆ ಹಿಂದೂಯೇತರ ಧಾರ್ಮಿಕ ಆಚರಣೆಗಳನ್ನು ಅನುಸರಿಸುತ್ತಿರುವ 18 ಮಂದಿ ಸಿಬ್ಬಂದಿ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

‘ಟಿಟಿಡಿ ಉತ್ಸವಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಜತೆಗೆ ಹಿಂದೂಯೇತರ ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸುತ್ತಿದ್ದ 18 ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶ ಹೊರಡಿಸಲಾಗಿದೆ. ತನ್ನ ದೇವಾಲಯಗಳು ಮತ್ತು ಧಾರ್ಮಿಕ ಚಟುವಟಿಕೆಗಳ ಆಧ್ಯಾತ್ಮಿಕ ಪಾವಿತ್ರ್ಯತೆಯನ್ನು ಕಾಪಾಡುವುದು ಟಿಟಿಡಿಯ ಬದ್ಧತೆಯಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಿರುಮಲದಲ್ಲಿ ಕೆಲಸ ಮಾಡುವ ಹಿಂದೂಯೇತರ ಸಿಬ್ಬಂದಿಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಕೋರಿ ಆಂಧ್ರಪ್ರದೇಶ ಸರ್ಕಾರಕ್ಕೆ ಟಿಟಿಡಿ ಮಂಡಳಿ ಇತ್ತೀಚೆಗೆ ಪತ್ರ ಬರೆದಿತ್ತು. ‘ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿರಬೇಕು. ಟಿಟಿಡಿಯು ಹಿಂದೂ ದತ್ತಿ ಸಂಸ್ಥೆಯಾಗಿರುವುದರಿಂದ ಹಿಂದೂಯೇತರರು ಸಿಬ್ಬಂದಿಯಾಗಿ ಮುಂದುವರಿಯಲು ಅವಕಾಶ ನೀಡುವುದಿಲ್ಲ’ ಎಂದು ಟಿಟಿಡಿ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ಆರ್‌.ನಾಯ್ಡು ಈ ಹಿಂದೆ ಘೋಷಿಸಿದ್ದರು.

‘ಇತರ ಧರ್ಮಕ್ಕೆ ಸೇರಿದ ಸಿಬ್ಬಂದಿಯನ್ನು ಸರ್ಕಾರದ ಇತರ ಇಲಾಖೆಗಳಿಗೆ ನಿಯುಕ್ತಿಗೊಳಿಸುವ ಅಥವಾ ಸ್ವಯಂ ನಿವೃತ್ತಿಗೆ (ವಿಆರ್‌ಎಸ್‌) ಅವಕಾಶ ಕಲ್ಪಿಸುವ ಕುರಿತು ಸಮಾಲೋಚನೆ ನಡೆಸಲಾಗುವುದು’ ಎಂದಿದ್ದರು. ‘ತಿರುಮಲದಲ್ಲಿ ಯಾವುದೇ ರೀತಿಯ ರಾಜಕೀಯ ಹೇಳಿಕೆಗಳಿಗೆ ಅವಕಾಶ ನೀಡುವುದಿಲ್ಲ. ಅಂತಹ ವ್ಯಕ್ತಿಗಳು ಮತ್ತು ರಾಜಕೀಯ ಪಕ್ಷಗಳ ಪರ ಪ್ರಚಾರ ಮಾಡುವವರ ವಿರುದ್ಧ ಅಗತ್ಯಬಿದ್ದರೆ ಕಾನೂನುಬದ್ಧವಾಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ನಾಯ್ಡು ಹೇಳಿಕೆ ನೀಡಿದ್ದರು.

Related posts

ಅಪ್ರಾಪ್ತ ಹಿಂದೂ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..! ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ..! ಅಂದು ಜಾತ್ರೆಯಲ್ಲಿ ನಡೆದದ್ದೇನು..?

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಉರುಳಿ ಬಿದ್ದ ಮರ, ವಾಹನ ಸಂಚಾರ ಅಸ್ತವ್ಯಸ್ಥ

ಶ್ವಾನ ನೋಡಿಕೊಳ್ಳಲು ಜನ ಬೇಕಾಗಿದ್ದಾರೆ!,ಸಂಬಳ ಒಂದು ಕೋಟಿ ರೂಪಾಯಿ!