ಕರಾವಳಿ

ಹಾನಗಲ್ ಉಪಚುನಾವಣೆ: ಟಿ. ಎಂ.ಶಹೀದ್ ವೀಕ್ಷಕರಾಗಿ ನೇಮಕ

23

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ವಿಧಾನ ಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಪರವಾಗಿ ಕೆಪಿಸಿಸಿಯ ವೀಕ್ಷಕರಾಗಿ ಕಾಂಗ್ರೆಸ್‌ ಮುಖಂಡ ಟಿ. ಎಂ. ಶಹೀದ್ ತೆಕ್ಕಿಲ್ ರವರನ್ನು ಕೆಪಿಸಿಸಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹಮದ್ ತಿಳಿಸಿರುತ್ತಾರೆ.

ಟಿ. ಎಂ. ಶಹೀದ್ ತೆಕ್ಕಿಲ್ NSUI ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೆಸ್‌ ನ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಹಾವೇರಿ ಜಿಲ್ಲೆಯ ಹಿರೆಕ್ಕೆರೂರು ವಿಧಾನ ಸಭಾ ಕ್ಷೇತ್ರ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕೆಪಿಸಿಸಿಯ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.