Latestರಾಜ್ಯಶಿಕ್ಷಣ

ಇಂದು(ಮೇ.4) ನೀಟ್ ಪರೀಕ್ಷೆಯಲ್ಲೂ ಜನಿವಾರ ತೆಗೆಸಿದ ಅಧಿಕಾರಿಗಳು..! ಪರೀಕ್ಷಾ ಕೇಂದ್ರದ ‌ಮುಂದೆ ಪ್ರತಿಭಟನೆ..!

320

ನ್ಯೂಸ್ ನಾಟೌಟ್ : ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ನೀಟ್ (NEET) ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ ಎನ್ನಲಾಗಿದೆ.

ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್‌ ಎಂಬವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ.

ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಶ್ರೀಪಾದ್ ಪಾಟೀಲ್​ ಗೆ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸೂಚನೆಯಂತೆ ಶ್ರೀಪಾದ್ ಪಾಟೀಲ್‌ ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಪರೀಕ್ಷೆ ಬರೆದಿದ್ದಾರೆ.

ಈ ಘಟನೆಯನ್ನು ಖಂಡಿಸಿ ಪರೀಕ್ಷಾ ಕೇಂದ್ರದ ‌ಮುಂದೆ ಬ್ರಾಹ್ಮಣ ಸಮಾಜ ಪ್ರತಿಭಟನೆ ನಡೆಸಿದೆ. ಜನಿವಾರ ತೆಗೆಸಿದ ಅಧಿಕಾರಿಯನ್ನು ಅಮಾನತ್ತು ಮಾಡುವಂತೆ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ.

ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಗೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಶಿವಮೊಗ್ಗ, ಬೀದರ್ ಮತ್ತು ಧಾರವಾಡ ಪರೀಕ್ಷಾ ಕೇಂದ್ರಗಳಲ್ಲಿ ತೆಗೆಸಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು.

12 ಮದುವೆಯಾಗಿ ಪೊಲೀಸರಿಗೆ ಸಿಕ್ಕಿಬಿದ್ದ 21ರ ಯುವತಿ..! ಗುಜರಾತ್‌ ನಲ್ಲಿ ಕಾಜಲ್, ಹರಿಯಾಣದಲ್ಲಿ ಸೀಮಾ, ಬಿಹಾರದಲ್ಲಿ ನೇಹಾ ಮತ್ತು ಉತ್ತರ ಪ್ರದೇಶದಲ್ಲಿ ಸ್ವೀಟಿ ಅವತಾರ..!

See also  ತಾಯಿ ಸಾವಿನ ನೋವನ್ನು ಸಹಿಸಲಾಗದೇ ಮಗನೂ ಆತ್ಮಹತ್ಯೆಗೆ ಶರಣು:ಒಂದೂವರೆ ತಿಂಗಳ ಹಿಂದೆ ನೇಣಿಗೆ ಶರಣಾಗಿದ್ದ ತಾಯಿ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget