Uncategorized

ಚಕ್ಕುಲಿ ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಮಗು ದಾರುಣ ಸಾವು

ನ್ಯೂಸ್ ನಾಟೌಟ್:ಪುಟ್ಟ ಮಕ್ಕಳು ಮನೆಯಲ್ಲಿದ್ದರೆ ಪೋಷಕರು ತುಂಬಾನೆ ಎಚ್ಚರಿಕೆಯಿಂದಿರಬೇಕಾಗುತ್ತದೆ.ಒಂದು ಕ್ಷಣ ಎಚ್ಚರ ತಪ್ಪಿದರೂ ಕೂಡ ಏನೆಲ್ಲ ಅವಾಂತರಗಳಾಗುತ್ತವೆ ಅನ್ನೋದಕ್ಕೆ ಅನೇಕ ಘಟನೆಗಳು ವರದಿಯಾಗುತ್ತಲೇ ಇದೆ.ಇದೀಗ ಬಾಲಕನೋರ್ವ ಚಕ್ಕುಲಿಯನ್ನು ತಿನ್ನುತ್ತಿರುವ ವೇಳೆ ಚಕ್ಕುಲಿ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿರುವ ಗಟನೆ ವರದಿಯಾಗಿದೆ.

ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾಗಿದ್ದು,ಈ ಘಟನೆ ಕೇರಳದಲ್ಲಿ (Kerala) ನಡೆದಿದೆ.ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್‍ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು ಎಂದು ಹೇಳಲಾಗಿದೆ. ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ.ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್‍ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.

ಬಾಲಕ ಚಕ್ಕುಲಿಯನ್ನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಕಷ್ಟವಾಯಿತು. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.ಅವಳಿ ಸಹೋದರಿ ವೈಗಾ ಹಾಗೂ ತಂದೆ, ತಾಯಿಯನ್ನು ವೈಷ್ಣವ್ ಅಗಲಿದ್ದಾನೆ.

Related posts

ಮಕರ ಸಂಕ್ರಾತಿಯ ಪರಮಾನಂದ: ಗವಿಗಂಗಾಧರೇಶ್ವರನಿಗೆ ಸೂರ್ಯದೇವರ ಅಪ್ಪುಗೆ..!

ಅಂಗನವಾಡಿ ಕೇಂದ್ರ ಉಳಿಸಿಕೊಳ್ಳಲು ಮಾಂಗಲ್ಯ ಅಡವಿಟ್ಟ ಅಂಗನವಾಡಿ ಕಾರ್ಯಕರ್ತೆ..!

ಬಿಷಪ್ ಕಾಟನ್ ಬಾಲಕಿಯರ ಬೀದಿ ಕಾಳಗ