ಟೋಕಿಯೋ: ಪ್ಯಾರಾಲಿಂಪಿಕ್ಸ್ ನಲ್ಲಿ ಸೋಮವಾರ ಭಾರತೀಯ ಕ್ರೀಡಾಪಟುಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅವನಿ ಚಿನ್ನದ ಪದಕ ಗೆಲ್ಲುತ್ತಿದ್ದಂತೆ ಪುರುಷರ ಎಫ್ 56 ಸ್ಪರ್ಧೆಯಲ್ಲಿ ಡಿಸ್ಕಸ್ ಥ್ರೋಯರ್ ಯೋಗೀಶ್ ಕಥುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. 24ರ ಹರೆಯದ ದೆಹಲಿಯ ಕಿರೋರಿಮಲ್ ಕಾಲೇಜಿನಲ್ಲಿ ಬಿ.ಕಾಂ ಪದವೀಧರನಾಗಿದ್ದು, ಬೆಳ್ಳಿ ಪದಕವನ್ನು ಕೊನೆಯ ಪ್ರಯತ್ನದಲ್ಲಿ 44.38 ಮೀ ದೂರಕ್ಕೆ ಎಸೆಯುವ ಮೂಲಕ ಗೆದ್ದುಕೊಂಡರು. ದೇವೇಂದ್ರ ಜಜಾರಿಯಾ ಮತ್ತು ಸುಂದರ್ ಸಿಂಗ್ ಅವರು ಜಾವೆಲಿನ್ ಥ್ರೋ ಕ್ಲಾಸ್ ಎಫ್ 46 ವಿಭಾಗದಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕವನ್ನು ಕ್ರಮವಾಗಿ ಗೆದ್ದಿದ್ದಾರೆ.