ಕರಾವಳಿಕ್ರೈಂ

ಪುಂಜಾಲಕಟ್ಟೆ:ಕಾರು-ಸ್ಕೂಟಿ ಡಿಕ್ಕಿ:ಓರ್ವ ಮೃತ್ಯು,ಮತ್ತೋರ್ವ ಗಂಭೀರ

ನ್ಯೂಸ್ ನಾಟೌಟ್ : ದ್ವಿಚಕ್ರ ವಾಹನ ಮತ್ತು ಕಾರು ಢಿಕ್ಕಿ ಹೊಡೆದು ಸವಾರನೋರ್ವ  ಮೃತಪಟ್ಟಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಎ.28 ರಂದು ಬೆಳಗ್ಗೆ ಸಂಭವಿಸಿದೆ. ಸ್ಕೂಟಿ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಕೂಟಿ ಸವಾರ, ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ (35) ಮೃತಪಟ್ಟವರಾಗಿದ್ದು, ಅವರ ನೆರೆಮನೆಯ ಆಕಾಶ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಬ್ಬರೂ ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಎದುರಿನಿಂದ ಅತೀವೇಗದಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ರಿಟ್ಜ್ ಕಾರು ಢಿಕ್ಕಿ ಹೊಡೆದಿದೆ.

ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು, ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಪುಂಜಾಲಕಟ್ಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮೆಣಸಿನ ಬಜ್ಜಿ ಮಾಡಿ ತಿಂದು ಚಿನ್ನ ಹಣ ಕದ್ದೊಯ್ದ ಕಳ್ಳರು..! ಗ್ಯಾಸ್‌ ಸಿಲಿಂಡರ್ ಗಳೂ ನಾಪತ್ತೆ..!

ಗೂನಡ್ಕ: ಕಮರಿಗೆ ಉರುಳಿದ ಪೂರ್ಣಿಮಾ ಬಸ್

ಜೋಶಿ ವಿರುದ್ಧದ ಕುಮಾರಸ್ವಾಮಿ ಟೀಕೆಗೆ ಬ್ರಾಹ್ಮಣ ಮಹಾಸಭಾ ಆಕ್ರೋಶ