ನ್ಯೂಸ್ ನಾಟೌಟ್ : ಭಾರತದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್, ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕರ್ನಾಟಕದ ಬಿಡದಿಯಲ್ಲಿ ಬೃಹತ್ ತಯಾರಕ ಘಟಕವನ್ನು ಹೊಂದಿದ್ದು, ಹಲವು ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಸದ್ಯ ಕಂಪನಿಯು ಈ ಫೆಬ್ರವರಿ ತಿಂಗಳ ಒಟ್ಟಾರೆ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ.
ಕಳೆದ ತಿಂಗಳು (ಫೆಬ್ರವರಿ – 2025) ಟೊಯೊಟಾ ಕಿರ್ಲೋಸ್ಕರ್ ಮೋಟಾರ್, ಬರೋಬ್ಬರಿ 28,414 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 25,220 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 13% ಬೆಳವಣಿಗೆಯಾಗಿದೆ.
ಅದರಲ್ಲೂ ಟೊಯೊಟಾ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ 26,414 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದ್ದರೆ, ವಿದೇಶಕ್ಕೆ 2,000 ಯುನಿಟ್‌ಗಳನ್ನು ರಫ್ತು ಮಾಡಿದೆ. ಟೊಯೊಟಾ ಈ ಪರಿಪ್ರಮಾಣದಲ್ಲಿ ಅಧಿವೃದ್ದಿ ಕಾಣಲು ಇನ್ನೋವಾ ಕ್ರಿಸ್ಟಾ, ಇನ್ನೋವಾ ಹೈಕ್ರಾಸ್, ಅರ್ಬನ್ ಕ್ರೂಸರ್ ಹೈರೈಡರ್, ಟೈಸರ್, ಗ್ಲಾನ್ಜಾ, ಹಿಲಕ್ಸ್, ಫಾರ್ಚೂನರ್ ಹಾಗೂ ರೂಮಿಯನ್ ಕಾರುಗಳು ಪ್ರಮಖವಾದ ಕಾರಣವಾಗಿವೆ.