ಕರಾವಳಿಕ್ರೈಂ

ಮಂಗಳೂರು: ಸಂಚಾರಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ..! ಗಾಯಗೊಂಡ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ ಮಂಗಳೂರಿನಿಂದ ವರದಿಯಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನವಾರ ಸಂಜೆ ಮಂಗಳೂರು ಸಿಟಿ ಸೆಂಟರ್ ರಿಕ್ಷಾ ಪಾರ್ಕಿಂಗ್ ಎದುರು ರಸ್ತೆಯಲ್ಲಿ ಸಂಚಾರಿ ಪೊಲೀಸ್‌ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ರೆಹಮಾನ್ ಎಂಬಾತ ಅವಾಚ್ಯ ಶಬ್ಧಗಳಿಂದ ಬೈದು ಸಮವಸ್ತ್ರ ಕೈಯಿಂದ ಎಳೆದು ಎದೆ ಭಾಗಕ್ಕೆ ಗುದ್ದಿ ನೋವನ್ನುಂಟು ಮಾಡಿದ್ದಾನೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಸರ್ಕಾರಿ ಶಾಲೆಯ ಶಿಕ್ಷಕನನ್ನು ಅಪಹರಿಸಿ ಬಂದೂಕು ತೋರಿಸಿ ಬಲವಂತದ ಮದುವೆ..! ಈ ಬಗ್ಗೆ ವಧು ಹೇಳಿದ್ದೇನು..? ಇಲ್ಲಿದೆ ವೈರಲ್ ವಿಡಿಯೋ

ಕುಡಿದ ಅಮಲಿನಲ್ಲಿ ನಡುರಸ್ತೆಯಲ್ಲೇ ನಿಂತು ಮೂತ್ರ ವಿಸರ್ಜಿಸಿದ ಪೊಲೀಸ್..! ವಿಡಿಯೋ ವೈರಲ್

ರಕ್ಷಣೆಗೆಂದು ಸೊಂಟದಲ್ಲಿಟ್ಟುಕೊಂಡಿದ್ದ ಚಾಕು ಚುಚ್ಚಿ ಸಾವು..! ಬೈಕ್ ಅಪಘಾತದ ವೇಳೆ ಘಟನೆ..!