ಕರಾವಳಿಕ್ರೈಂಬೆಂಗಳೂರುವೈರಲ್ ನ್ಯೂಸ್

ಬಸ್​ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥ..! ಚಲಿಸುತ್ತಿದ್ದ ಬಸ್ ಹತ್ತಿ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಟ್ರಾಫಿಕ್​ ಪೊಲೀಸ್..!

ನ್ಯೂಸ್ ನಾಟೌಟ್: ಕೆಎ 51 AJ 6905 ನಂಬರ್​ನ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು, ಬಸ್ ಚಲಾಯಿಸುತ್ತಿರುವಾಗಲೇ ಚಾಲಕ ಅಸ್ವಸ್ಥನಾಗಿದ್ದಾನೆ. ಗುರುವಾರ ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ನಗರ ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಎದೆ ನೋವಿನಿಂದ ಬಳಲುತ್ತಿದ್ದ ಚಾಲಕ ವೀರೇಶ್ ಕೂತ ಜಾಗದಲ್ಲೇ ಒಂದು ಕಡೆ ವಾಲಿದ್ದಾರೆ. ಹೀಗಾಗಿ ಬಸ್​ ನಿಧಾನವಾಗಿ ಚಲಿಸುತ್ತಿತ್ತು. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಹಲಸೂರು ಸಂಚಾರಿ ಠಾಣೆ ಎಎಸ್ಐ ಆರ್.ರಘುಕುಮಾರ್ ಅನುಮಾನಗೊಂಡು ಬಸ್ ಬಳಿ ಬಂದು ನೋಡಿದಾಗ, ಚಾಲಕ ವಿರೇಶ್​ ಒಂದು ಕಡೆ ವಾಲಿದ್ದನ್ನು ಕಂಡಿದ್ದಾರೆ. ತಕ್ಷಣ ಸಿನಿಮೀಯ ರೀತಿ ಚಲಿಸುತ್ತಿದ್ದ ಬಸ್ ಹತ್ತಿದ್ದಾರೆ. ನಂತರ ಹ್ಯಾಂಡ್ ಬ್ರೇಕ್ ಹಾಕಿ ಬಸ್​ನ್ನು ನಿಲ್ಲಿಸಿದ್ದಾರೆ.

ಬಳಿಕ, ಆ್ಯಂಬುಲೆನ್ಸ್ ​ಗೂ ಕಾಯದೆ ಅಶೋಕ ನಗರ ಟ್ರಾಫಿಕ್ ಪೊಲೀಸ್​ ಪ್ರಸನ್ನ ಕುಮಾರ್ ಅವರ ಸಹಾಯದಿಂದ ಚಾಲಕ ವೀರೇಶ್​ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಚಾಲಕ ವಿರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Click

https://newsnotout.com/2024/09/bjp-leader-munirathna-again-arrest-due-to-private-video-case-kannada-news/
https://newsnotout.com/2024/09/hdk-kannada-news-nagamangala-issue-he-will-try-to-release-accused-of-that-conflict/
https://newsnotout.com/2024/09/ganeshan-chaturti-incident-similer-to-nagamangala-kannada-news/
https://newsnotout.com/2024/09/davanagere-ganesha-visarjane-kananda-news-18-people-are-under-bar/

Related posts

ಹಿಂದೂ ಯುವಕನ ಜತೆ ತಿರುಗಾಡುತ್ತಿದ್ದ ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಹೊಡೆದ ಯುವಕರು! ಈ ಜೋಡಿ ಪ್ರೀತಿಸುತ್ತಿದ್ದರೇ..? ಮುಂದೇನಾಯ್ತು? ಇಲ್ಲಿದೆ ವೈರಲ್ ವಿಡಿಯೋ

ಸುಳ್ಯ: ಜೀಪ್-ಲಾರಿ ನಡುವೆ ಅಪಘಾತ, ಮಡಿಕೇರಿ ಕಡೆಗೆ ಹೋಗುತ್ತಿದ್ದ ಜೀಪ್ ಜಖಂ

ತಾಲೂಕು ಪಂಚಾಯತ್ ಕ್ವಾಟ್ರಸ್‌ನಲ್ಲಿ ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ..!