ದೇಶ-ವಿದೇಶ

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು..! ಮುಂದೇನಾಯ್ತು..?

ನ್ಯೂಸ್‌ ನಾಟೌಟ್‌: ಕಳೆದ ಕೆಲವು ದಿನಗಳ ಹಿಂದೆ ಹೌರ-ಮುಂಬೈ ನಡುವೆ ಸಂಚರಿಸುತ್ತಿದ್ದ ರೈಲು ಹಳಿ ತಪ್ಪಿ ಇಪ್ಪತ್ತು ಮಂದಿ ಗಾಯಗೊಂಡ ಘಟನೆ ಮಾಸುವ ಮುನ್ನವೇ ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದ್ದು, ಅದೃಷ್ಟವಶಾತ್‌ ಯಾವುದೇ ಗಾಯ, ಜೀವ ಹಾನಿ ಸಂಭವಿಸಿಲ್ಲ.

ಉತ್ತರ ಪ್ರದೇಶದ ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣದ ನಡುವೆ ಸಬರಮತಿ ಎಕ್ಸ್‌ಪ್ರೆಸ್ ಹಳಿತಪ್ಪಿದೆ. ಶನಿವಾರ ಬೆಳಗಿನ ಜಾವ 2.30ಸುಮಾರಿಗೆ ಈ ಘಟನೆ ನಡೆದಿದ್ದು ರೈಲಿನ 20 ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿರುವ ಕುರಿತು ವರದಿಯಾಗಿಲ್ಲ ಎನ್ನಲಾಗಿದೆ.

ರೈಲು ಹಳಿಗಳ ಮೇಲೆ ಬಂಡೆ ಕಲ್ಲುಗಳು ಬಿದ್ದಿದ್ದು ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ಲೋಕೋ ಪೈಲಟ್ ತಿಳಿಸಿದ್ದಾರೆ. ಘಟನೆಯ ನಂತರ ಈ ಮಾರ್ಗದಲ್ಲಿ ಸಂಚರಿಸುವ ಏಳು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಮತ್ತು ಮೂರು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಘಟನೆಯ ಹಿಂದೆ ವಿಧ್ವಂಸಕ ಕೃತ್ಯದ ಶಂಕೆ ಕೂಡ ವ್ಯಕ್ತವಾಗಿದ್ದು ಈ ಕುರಿತು ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈಲು ಪ್ರಯಾಣಿಕರನ್ನು ಬಸ್ಸಿನ ಮೂಲಕ ತೆರಳಲು ವ್ಯವಸ್ಥೆ ಮಾಡಿಕೊಡಲಾಯಿತು ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

Related posts

ಹೆಚ್.​ಡಿ ಕುಮಾರಸ್ವಾಮಿ ಮತ್ತು ಮಗ ನಿಖಿಲ್ ವಿರುದ್ಧ ಬೆಂಗಳೂರಿನಲ್ಲಿ ಎಫ್.​ಐ.ಆರ್​​..! ಕೇಂದ್ರ ಸಚಿವ ಎ1 ಆರೋಪಿ..!

ಆಂಬ್ಯಲೆನ್ಸ್ ನಲ್ಲೇ ಬೀಚ್ ಪ್ರವಾಸಕ್ಕೆ ತೆರಳಿದ ನೂರಕ್ಕೂ ಹೆಚ್ಚು ನಿತ್ಯ ರೋಗಿಗಳು..! 100 ಆಂಬ್ಯುಲೆನ್ಸ್ ಗಳಲ್ಲಿ ಬಂದ ಅಪರೂಪದ ವಿಡಿಯೋ ವೀಕ್ಷಿಸಿ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌..? ಹೊಸ ಮಸೂದೆ ಅಂಗೀಕಾರ..!