Uncategorized

10 ಕೋಟಿ ರೂ.ಲಾಟರಿ ಗೆದ್ದ ಆಟೋ ಚಾಲಕ!!,ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ರೋಚಕ ಕಥೆ!!

ನ್ಯೂಸ್‌ ನಾಟೌಟ್‌ :ಸಾಮಾನ್ಯ ಆಟೋ ಚಾಲಕನೊಬ್ಬ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಭಾರಿ ಅಪರೂಪದ ಘಟನೆ ಬಗ್ಗೆ ವರದಿಯಾಗಿದೆ.ಹೌದು, ಈ ವ್ಯಕ್ತಿಗೆ ಅದೃಷ್ಟ ದೇವತೆಯೇ ಒಲಿದು ಬಂದಿದ್ದಾಳೆ.ಲಾಟರಿಯಲ್ಲಿ ಬರೋಬ್ಬರಿ 10 ಕೋಟಿ ರೂ. ಗೆಲ್ಲುವ ಮೂಲಕ ಆ ವ್ಯಕ್ತಿಯ ಬಾಳಿಗೆ ಬೆಳಕಾಗಿದ್ದಾಳೆ.

ಕೇರಳದ ಆಟೋ ಚಾಲಕರೊಬ್ಬರಿಗೆ ಈ ಅದೃಷ್ಟ ಒಲಿದಿದ್ದು, ನಿನ್ನೆ ರಾತ್ರಿಯಷ್ಟೇ ಅವರು ಲಾಟರಿ ಟಿಕೆಟ್ ಖರೀದಿ  ಮಾಡಿದ್ದರು. ಇಂದು ಬೆಳಗ್ಗೆ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಗೆದ್ದು ಏಕಾಏಕಿ ಕೋಟ್ಯಾಧಿಪತಿಯಾಗಿದ್ದಾರೆ.

ಕೇರಳದ ಕಣ್ಣೂರಿನ  ಆಳಕೋಡ್ ನಿವಾಸಿ ನಾಸರ್ ಅವರು 10 ಕೋಟಿ ರೂ. ಬಂಪರ್ ಲಾಟರಿ ಗೆದ್ದವರು. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿರುವ ನಾಸರ್ ಇದೀಗ ಬಂಪರ್ ಲಾಟರಿ ಗೆಲ್ಲುವ ಮೂಲಕ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ.ಕೇರಳದ ಕಾರ್ತಿಕಪುರದ ರಾರರಾಜೇಶ್ವರಿ ಲಾಟರಿ ಏಜನ್ಸಿಯಿಂದ ನಾಸರ್ ಲಾಟರಿ ಟಿಕೆಟ್ ಖರೀಸಿದ್ದು, ಅವರ ಅದೃಷ್ಟ ಖುಲಾಯಿಸಿ ಈ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಹಣವನ್ನು ಗೆದ್ದಿದ್ದಾರೆ.

ಕಾರ್ತಿಕಪುರದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುವ ನಾಸರ್ ನಿನ್ನೆ ರಾತ್ರಿಯಷ್ಟೇ ಲಾಟರಿ ಟಿಕೆಟ್ ಖರೀದಿಸಿದ್ದರು ಎಂದು ಲಾಟರಿ ಏಜೆಂಟ್ ರಾಜು ಹೇಳಿದ್ದಾರೆ. ಇದೀಗ ಟಿಕೆಟ್ ಖರೀದಿ ಮಾಡಿದ ಮರು ದಿನವೇ ನಾಸಿರ್ ಅವರಿಗೆ 10. ಕೋಟಿ ರೂ. ಗಳ ಬಂಪರ್ ಲಾಟರಿ ಸಿಕ್ಕಿದ್ದು,  ಈ ಸುದ್ದಿಯನ್ನು ಕೇಳಿ ಅದೃಷ್ಟ ಅಂದ್ರೆ ಇದಪ್ಪಾ ಎಂದು ನೆಟ್ಟಿಗರು ಹೇಳಿದ್ದಾರೆ.

Related posts

ಕಲಾವಿದರು, ಸಾಹಿತಿಗಳ ದತ್ತಾಂಶ ಸಂಗ್ರಹಕ್ಕೆ ಅರ್ಜಿ ಆಹ್ವಾನ

ಹಿರಿಯ ನಟ ಮಿಥುನ್ ಚಕ್ರವರ್ತಿ ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 70ನೇ ರಾಷ್ಟ್ರೀಯ ಚಲನಚಿತ್ರ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ

ಜಪಾನ್‌ನಲ್ಲಿ ಪ್ರಬಲ ಭೂಕಂಪ: 7.1 ತೀವ್ರತೆ ದಾಖಲು..! ಸುನಾಮಿ ಅಪ್ಪಳಿಸುವ ಎಚ್ಚರಿಕೆ..!