ಉಡುಪಿಕರಾವಳಿದಕ್ಷಿಣ ಕನ್ನಡದೈವಾರಾಧನೆಮಂಗಳೂರುವೈರಲ್ ನ್ಯೂಸ್

ತುಳುನಾಡ ಕಾರಣಿಕ ಕ್ಷೇತ್ರ ಪಣೋಲಿಬೈಲಿನಲ್ಲಿ 23 ಸಾವಿರ ಕೋಲ ಸೇವೆಗಳು ಬುಕ್ಕಿಂಗ್‌..! ಹರಕೆ ಪೂರ್ಣಗೊಳ್ಳಲು 35 ವರ್ಷಗಳು ಬೇಕಾ..?

257

ನ್ಯೂಸ್ ನಾಟೌಟ್: ತುಳುನಾಡ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ಕಿಂಗ್‌ ಇರುವುದರಿಂದ ಭಕ್ತರಿಗೆ ಶೀಘ್ರ ಸೇವೆ ಸಂದಾಯದ ಅವಕಾಶದ ಹಿನ್ನೆಲೆಯಲ್ಲಿ ಪ್ರತೀ ದಿನ ನಡೆಯುತ್ತಿದ್ದ ಕೋಲ ಸೇವೆಯಲ್ಲಿ 4 ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಮೇ 3ರಿಂದ ಅವಕಾಶ ನೀಡಲಾಗಿದೆ. ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಹಾಗೂ ಕೋಲ ಸೇವೆಗಳು ವಿಶೇಷವಾಗಿದ್ದು, ವಾರದ 3 ದಿನ ಅಗೇಲು ಹಾಗೂ ವಾರದ 5 ದಿನ ಕೋಲ ಸೇವೆ ಸಂದಾಯವಾಗುತ್ತದೆ.

ಬೆಳಗ್ಗೆ ನಿಗದಿತ ಸಮಯದೊಳಗೆ ಬಂದವರಿಗೆ ಎಷ್ಟು ಬೇಕಾದರೂ ಅಗೇಲು ಸೇವೆ ನೀಡುವುದಕ್ಕೆ ಅವಕಾಶವಿದ್ದು, ಆದರೆ ಈ ಹಿಂದೆ ದಿನವೊಂದಕ್ಕೆ ಕೋಲ ಸೇವೆ ನೀಡುವುದಕ್ಕೆ ಬರೀ ನಾಲ್ವರಿಗೆ ಮಾತ್ರ ಅವಕಾಶವಿತ್ತು. ಆದರೆ ಕೋಲ ಸೇವೆಗಳ ಬುಕ್ಕಿಂಗ್‌ ಹೆಚ್ಚಿದ್ದು, ಲೆಕ್ಕಾಚಾರ ಹಾಕಿದರೆ ಅದು ಪೂರ್ಣಗೊಳುವುದಕ್ಕೆ ಕನಿಷ್ಠ 35 ವರ್ಷ ಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಸೋಮವಾರ ಹಾಗೂ ಶನಿವಾರ ಹೊರತುಪಡಿಸಿ ವಾರದಲ್ಲಿ 5 ದಿನ ಕೋಲ ಸೇವೆಗೆ ಅವಕಾಶವಿದ್ದರೂ ತುಳುವಿನ ಆಟಿ ತಿಂಗಳು, ಅಮಾವಾಸ್ಯೆ, ಷಷ್ಠಿ, ಸಜೀಪ ಮಾಗಣೆಯ ಜಾತ್ರೆ, ಉತ್ಸವ ಮೊದಲಾದ ಸಂದರ್ಭ ಕೋಲ ಸೇವೆ ಇರುವುದಿಲ್ಲ. ಹೀಗಾಗಿ ವರ್ಷಕ್ಕೆ 600-700 ಮಂದಿಗೆ ಮಾತ್ರ ಕೋಲ ಸೇವೆಗೆ ಅವಕಾಶ ಸಿಗುತ್ತಿತ್ತು. ಹೀಗಾಗಿ ಭಕ್ತರಿಗೆ ಶೀಘ್ರ ಸೇವೆಗೆ ಅವಕಾಶ ಸಿಗುವ ದೃಷ್ಟಿಯಿಂದ ದೈವದ ಬಳಿ ಹರಕೆ ಮಾಡಿ ಮಾಗಣೆಯ ದೈವದ ಅಪ್ಪಣೆ ಪಡೆದು ದಿನಕ್ಕೆ 4 ಕೋಲ ಸೇವೆ ನೀಡಿದರೂ ಪ್ರತೀ ಕೋಲದಲ್ಲಿ ಇಬ್ಬರಿಗೆ ಪ್ರಸಾದದಂತೆ 8 ಮಂದಿಗೆ ಪ್ರಸಾದ ನೀಡುವುದಕ್ಕೆ ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ.

See also  ಮಂತ್ರವಾದಿಯ ಔಷಧಿಗೆ 7ರ ಬಾಲಕ ಬಲಿ? ಏನಿದು ಮಂತ್ರವಾದಿಯ ಮಾಯಾಜಾಲ?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget