Latestಕರಾವಳಿದಕ್ಷಿಣ ಕನ್ನಡ

ಧರ್ಮಸ್ಥಳ:ಏರೋಸ್ಪೇಸ್ ಎಂಜಿನಿಯರ್ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ;ಕೇರಳದ 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ!

1.2k

ನ್ಯೂಸ್ ನಾಟೌಟ್: ಧರ್ಮಸ್ಥಳ ಮೂಲದ ಏರೋಸ್ಪೆಸ್ ಎಂಜಿನಿಯರ್ ಪಂಜಾಬ್ ಕಾಲೇಜಿನಲ್ಲಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.ಘಟನೆಗೆ ಪ್ರೇಮ ವೈಫಲ್ಯವೇ ಕಾರಣ ಎನ್ನಲಾಗಿದೆ.

ನಿನ್ನೆಯಷ್ಟೇ ಶಾಕಿಂಗ್ ಸುದ್ದಿಯೊಂದು ಹೊರಬಂದಿತ್ತು. ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಸಿದ್ದ ಆಕೆ ನಿಗೂಢವಾಗಿ ಸಾವನ್ನಪ್ಪಿದ್ದು ಎಲ್ಲರನ್ನು ಚಿಂತೆಗೀಡು ಮಾಡಿತ್ತು. ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದು, ಅಲ್ಲಿ ಆಕೆ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಕಾಲೇಜಿನವರೇ ನನ್ನ ಮಗಳಿಗೆ ಏನೋ ಮಾಡಿದ್ದಾರೆ ಎನ್ನುವುದು ಆಕಾಂಕ್ಷ ಪೋಷಕರ ವಾದವಾಗಿತ್ತು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಹುಡುಗಿಯಲ್ಲ ಎಂದು ಆರೋಪಿಸಿದ್ದರು.

ಸದ್ಯ ಈ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಅಸಲಿ ವಿಚಾರ ಈಗ ಹೊರಬಿದ್ದಿದೆ.ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಜೊತೆ ಪ್ರೇಮವಾಗಿತ್ತು ಎನ್ನಲಾಗಿದೆ. ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಆಕಾಂಕ್ಷಗೆ ಪ್ರೇಮಾಂಕುರವಾಗಿತ್ತು. ಅಲ್ಲದೇ ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆಯೂ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದಳು ಎನ್ನಲಾಗಿದೆ. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆತ್ಮಹತ್ಯೆಗೆ ಪ್ರೇರಣೆ ಹಿನ್ನೆಲೆ ಮ್ಯಾಥ್ಯೂ ವಿರುದ್ದ ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಂದು ಶವಪರೀಕ್ಷೆ ಬಳಿಕ ಹೆತ್ತವರಿಗೆ ಆಕಾಂಕ್ಷಳ ಮೃತದೇಹ ಹಸ್ತಾಂತರಿಸಲಾಗುತ್ತದೆ. ಇಂದು ಸಂಜೆ ವೇಳೆಗೆ ಧರ್ಮಸ್ಥಳ ಬೊಳಿಯೂರು ಮನೆಯಲ್ಲಿ ಆಕಾಂಕ್ಷ ಅಂತ್ಯಸಂಸ್ಕಾರ ನಡೆಯಲಿದೆ.‌ 

See also  ಸುಬ್ರಹ್ಮಣ್ಯ: 60 ಅಡಿ ಬಾವಿಗೆ ಬಿದ್ದ ಹಸುವಿನ ರಕ್ಷಣೆ, ಗೋಮಾತೆಯ ರಕ್ಷಣೆ ಹೇಗಿತ್ತು? ಇಲ್ಲಿದೆ ನೋಡಿ ರೋಚಕ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget