ಕರಾವಳಿಕೊಡಗು

ಮಡಿಕೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ

ನ್ಯೂಸ್ ನಾಟೌಟ್ : ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.ಬೇತು ಗ್ರಾಮದ ನಿವಾಸಿ ಹಕ್ ಎಂ.ಬಿ (31) ಹಾಗೂ ಎಂ.ಬಾಡಗ ಗ್ರಾಮದ ನಿವಾಸಿ ಬಿ.ಎಂ.ರಶೀದ್ (23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಇವರಿಬ್ಬರೂ ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು,ಇದರ ಮಾಹಿತಿ ಮೇರೆಗೆ ಇವರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.ಮಡಿಕೇರಿ ನಗರ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಸಾರ್ವಜನಿಕರಿಂದ ದೂರು ಆಗಾಗ ಕೇಳಿ ಬರುತ್ತಿತ್ತು. ಇದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮಡಿಕೇರಿ ಉಪವಿಭಾಗದ ಡಿಎಸ್‌ಪಿ ಎಂ.ಜಗದೀಶ್, ಮಡಿಕೇರಿ ನಗರ ವೃತ್ತದ ಸಿಪಿಐ ಉಮೇಶ್ ಉಪ್ಪಳಿಕೆ, ಮಡಿಕೇರಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂ.ಶ್ರೀನಿವಾಸ ಹಾಗೂ ಸಿಬ್ಬಂದಿ ಮತ್ತು ಡಿಸಿಆರ್‌ಬಿ ಸಿಬ್ಬಂದಿ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಲಾಗುತ್ತಿತ್ತು.ಈ ಆಧಾರದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  

Related posts

ಭಿಕ್ಷೆ ಬೇಡಿ 1 ಲಕ್ಷ ಹಣವನ್ನು ದೇವಸ್ಥಾನದ ಅನ್ನದಾನಕ್ಕೆ ನೀಡಿದ ವೃದ್ಧೆ

ಪಣಂಬೂರಿನಲ್ಲಿ ದೋಣಿ ದುರಂತ: ನಾಲ್ವರು ಮೀನುಗಾರರ ರಕ್ಷಣೆ ಓರ್ವ ನಾಪತ್ತೆ

ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟ ಪ್ರಕರಣ, ಓರ್ವ ಅರೆಸ್ಟ್‌, 5 ಮಂದಿ ವಿರುದ್ಧ ಪ್ರಕರಣ ದಾಖಲು