ಕೊಡಗು

ಮಡಿಕೇರಿ: ಜಿಂಕೆ ಬೇಟೆಯಾಡಿದ ಇಬ್ಬರು ಅರೆಸ್ಟ್,ಮೂವರು ಆರೋಪಿಗಳು ನಾಪತ್ತೆ

159

ನ್ಯೂಸ್ ನಾಟೌಟ್ :ಕೊಡಗಿನಲ್ಲಿ ಜಿಂಕೆಯನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೊಡಗಿನ ಪೊನ್ನಂಪೇಟೆ ಅರಣ್ಯ ವಲಯದ ಅಧಿಕಾರಿಗಳು ಹಾಗೂ ನಾಗರಹೊಳೆಯ ಕಲ್ಲಲ್ಲ ವನ್ಯಜೀವಿ ವಲಯದ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.ಪೊನ್ನಂಪೇಟೆಯ ನಿಟ್ಟೂರು ಗ್ರಾಮದ ಬಿಸಿ ಜೀವನ್ ಮತ್ತು ವಿಜಿ ಲಿಂಗರಾಜ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಅದೇ ಗ್ರಾಮದ ಶರತ್, ಚೇತನ್, ಸ್ವಾಮಿ ಸೇರಿದಂತೆ ಮೂವರು ಆರೋಪಿಗಳು ನಾಪತ್ತೆಯಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

ಮೂಲಗಳ ಪ್ರಕಾರ, ಆರೋಪಿ ಶರತ್ ಇತರರೊಂದಿಗೆ ನಾಗರಹೊಳೆ ಮಿತಿಯಲ್ಲಿರುವ ಕಲ್ಲಲ್ಲ ವನ್ಯಜೀವಿ ಅರಣ್ಯಕ್ಕೆ ತಮ್ಮ ಪರವಾನಗಿ ಪಡೆದ ಬಂದೂಕುಗಳೊಂದಿಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಅವರು ಚುಕ್ಕೆ ಜಿಂಕೆಯನ್ನು ಬೇಟೆಯಾಡಿ, ಅರಣ್ಯ ವಲಯದಿಂದ ಹೊರಗೆ ಕೊಂಡೊಯ್ದಿದ್ದಾರೆ. ನಂತರ ಜಿಂಕೆ ಮಾಂಸವನ್ನು ಹಂಚಿಕೊಂಡಿದ್ದಾರೆ. ಜಿಂಕೆಯ ಕೊಂಬುಗಳನ್ನು ಆರೋಪಿಗಳಲ್ಲಿ ಒಬ್ಬಾತ ತೆಗೆದುಕೊಂಡಿದ್ದಾನೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊನ್ನಂಪೇಟೆ ಹಾಗೂ ಕಲ್ಲಾಳ ವನ್ಯಜೀವಿ ಅರಣ್ಯಾಧಿಕಾರಿಗಳು ಮಾಂಸ ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ದಾಳಿ ನಡೆಸಿ ಜೀವನ್ ಮತ್ತು ಲಿಂಗರಾಜ್ ಎಂಬುವರನ್ನು ಬಂಧಿಸಿದ್ದಾರೆ. ಉಳಿದ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಜಿಂಕೆ ಮಾಂಸ, ಕೊಂಬು ಹಾಗೂ  ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತಲೆಮರೆಸಿಕೊಂಡಿರುವವರ ಪತ್ತೆಗೆ ತನಿಖೆ ಮುಂದುವರಿದಿದೆ.

ಪೊನ್ನಂಪೇಟೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಶಾಂತೇಶ್ ಅವರು ವಶಪಡಿಸಿಕೊಂಡ ಜಿಂಕೆ ಮಾಂಸವನ್ನು ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

See also  ವಿಚಾರವಾದಿ ಕೆ.ಎಸ್‌. ಭಗವಾನ್‌ ಅಟ್ಟಿಸಿಕೊಂಡು ಬಂದ ಕಾಡಾನೆ,ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರು
  Ad Widget   Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget