ನ್ಯೂಸ್ ನಾಟೌಟ್ : ವಿದ್ಯುತ್ ಶಾಕ್ ತಗಲಿ ಇಬ್ಬರು ಫೋಟೋಗ್ರಾಫರ್ಸ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ.
ವಿವೇಕ್(45) ಮತ್ತು ಮಧುಸೂಧನ್(35) ಮೃತಪಟ್ಟವರು. ದೀಪಾವಳಿ ಹಬ್ಬ ಹತ್ತಿರ ಬರುತ್ತಿದೆ ಎಂದು ಸ್ಟುಡಿಯೋ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.