ನ್ಯೂಸ್ ನಾಟೌಟ್: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಮಡಿಕೇರಿ ತಾಲೂಕಿನ ನಾಪೊಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ಈ ದುರ್ಘಟನೆ ನಡೆದಿದೆ.ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರೆಂದು ತಿಳಿದು ಬಂದಿದೆ.
ಇಬ್ಬರ ಪೈಕಿ ಓರ್ವನ ಮೃತದೇಹ ದೊರಕಿದ್ದು,ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಾಪೊಕ್ಲು ಪಿಎಸ್ ಐ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.