ಕರಾವಳಿಕ್ರೈಂ

ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು

ನ್ಯೂಸ್ ನಾಟೌಟ್: ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಮೂವರು ವಿದ್ಯಾರ್ಥಿನಿಯರಿಗೆ ಜಿಲ್ಲಾ ನ್ಯಾಯಾಲಯ ‍ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ನಡೆದಿತ್ತು. ಈ ಬಗ್ಗೆ ಭಾರಿ ಚರ್ಚೆಗಳು ನಡೆದವು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ಮೇಲೆ ದೂರು ದಾಖಲಾಗಿತ್ತು. ಶುಕ್ರವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ವಿದ್ಯಾರ್ಥಿನಿಯರು ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ತನಿಖಾಧಿಕಾರಿಯ ತನಿಖೆಗೆ ಸಹಕರಿಸಬೇಕು, ವಿಚಾರಣೆಗೆ ತಪ್ಪದೆ ಹಾಜರಾಗಬೇಕು ಹಾಗೂ ತಲಾ ₹ 20 ಸಾವಿರ ಮೌಲ್ಯದ ಬಾಂಡ್‌ ಸಲ್ಲಿಸಬೇಕು ಎಂಬ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದರು.

ಈ ಎಲ್ಲ ಬೆಳವಣಿಗೆಗಳ ನಡುವೆ ಮತ್ತೊಂದೆಡೆ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪೊಲೀಸರ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದ್ದು ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. ಬಿಜೆಪಿ ಕಚೇರಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿ ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚಿಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.

Related posts

ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜ್‌ನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಶುಭಹಾರೈಸಿದ ಡಾ.ಚಿದಾನಂದ ಕೆ.ವಿ.

ತನಗೆ ಕಚ್ಚಿದ ಹಾವನ್ನೇ ಹೆಗಲ ಮೇಲೆ ಹಾಕಿಕೊಂಡು ಆಸ್ಪತ್ರೆಗೆ ಬಂದ ಭೂಪ..! ಮುಂದೇನಾಯ್ತು..? ಇಲ್ಲಿದೆ ವೈರಲ್ ವಿಡಿಯೋ

ಜೀವವಿಮೆಯ ಹಣಕ್ಕಾಗಿ ಬಿಕ್ಷುಕನ ಹೆಣ ತಂದು ಗಂಡನೆಂದು ಅಂತ್ಯಸಂಸ್ಕಾರ ನಡೆಸಿದ ಮಹಿಳೆ..! ಅಜ್ಞಾತ ಸ್ಥಳದಲ್ಲಿದ್ದ ಆಕೆಯ ಗಂಡನನ್ನು ಪತ್ತೆ ಹಚ್ಚಿದ್ದೇ ರೋಚಕ..!