ಕರಾವಳಿಕ್ರೈಂ

ಉಡುಪಿ: ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ತಿರುವು! ಧ್ವನಿ ಎತ್ತಿದ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ ಕಳಿಸಿದ್ಯಾರು?

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂದು ಹೇಳಲಾಗುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ. ಅವರ ವಿರುದ್ಧ ದೂರು ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ ಹೇಳಿದ್ದಳು ಎನ್ನಲಾಗಿದೆ. ಈ ಹಿನ್ನೆಲೆ ಜು. 28 ರಂದು ಇನ್ಸ್ಟಾಗ್ರಾಮ್​ನಲ್ಲಿ ಜಿಗರ್ ಕೋಬ್ರಾ ಎಂಬ ಹೆಸರಿನ ಖಾತೆಯಿಂದ ಬೆದರಿಕೆ ಸಂದೇಶ ಬಂದಿದ್ದು, ಅದರಲ್ಲಿ ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ. ಇದು ವಿದ್ಯಾರ್ಥಿನಿಯ ಮಾನಸಿಕ ಕಿರುಕುಳ ತಂದಿದೆ ಎಂದು ಹೇಳಿಕೊಂಡಿದ್ದಾರೆ.

ಈ ವಿಚಾರ ಹಿಂದೂ ಸಂಘಟನೆಗಳಿಗೆ ತಿಳಿಸಿದ್ದಾರೆ. ನಂತರ ಹಿಂದೂ ಸಂಘಟನೆಗಳು ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಸ್‌ಪಿ ಜೊತೆ ಸಮಾಲೋಚನೆ ಮಾಡಿದ ಬಳಿಕ ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ಉಡುಪಿ ಸೆನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ.

Related posts

ಪ್ರೇಮಿಯ ಜತೆ ಜಗಳ ಮಾಡಿಕೊಂಡು ಆತನನ್ನು ಹೆದರಿಸಲು ಹೋಗಿ ಆಕಸ್ಮಿಕವಾಗಿ ಪ್ರಾಣ ಕಳೆದುಕೊಂಡ ಮಹಿಳೆ..! ಇಲ್ಲಿದೆ ವೈರಲ್ ವಿಡಿಯೋ

ಉಡುಪಿ: 6ನೇ ಮಹಡಿಯಿಂದ ಜಿಗಿದ 19 ರ ವಿದ್ಯಾರ್ಥಿ..! ಅಷ್ಟಕ್ಕೂ ಪರೀಕ್ಷಾ ಹಾಲ್ ನಲ್ಲಿ ನಡೆದದ್ದೇನು..?

ಜಾತ್ರೆ ಅಂಗಡಿಗಳಿಗೆ ಶರತ್ ಪಂಪ್ ವೆಲ್ ಕೇಸರಿ ಧ್ವಜ ನೆಟ್ಟದ್ದೇಕೆ? ಕೇಸರಿ ಧ್ವಜ ಹಾಕಿರುವ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಬೇಕೆ? ಇಲ್ಲಿದೆ ವಿಡಿಯೋ