ಕರಾವಳಿ

ಉಡುಪಿ: ಮಾಜಿ ಕಾಂಗ್ರೆಸ್ ಶಾಸಕ ಯು.ಆರ್. ಸಭಾಪತಿ ಇನ್ನಿಲ್ಲ!

296

ನ್ಯೂಸ್ ನಾಟೌಟ್: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ (ಮೇ 21) ಕೊನೆಯುಸಿರೆಳೆದಿದ್ದಾರೆ.
1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್‌ನ ಉದ್ಯಾವರ ಕ್ಷೇತ್ರದ ಸದಸ್ಯ ರಾಗಿದ್ದ ಇವರು, ಪರಿಷತ್‌ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಎಂದು ವರದಿ ತಿಳಿಸಿದೆ.
1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. 1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು.
1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಅಲ್ಲದೆ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

See also  ಸಮುದ್ರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, 3 ಸಿಬ್ಬಂದಿ ನಿಗೂಢ ನಾಪತ್ತೆ..! ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮೂಲಕ ಹುಡುಕಾಟ..!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget