Latestಉಡುಪಿಕರಾವಳಿಕ್ರೈಂವೈರಲ್ ನ್ಯೂಸ್

ಕಾರ್ಕಳ: ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ..! ಪ್ರಕರಣ ದಾಖಲು

603
Pc Cr: Public Tv

ನ್ಯೂಸ್ ನಾಟೌಟ್: ಉಡುಪಿಯ ಕಾರ್ಕಳದಲ್ಲಿ ಉದ್ಯಮಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ದಿಲೀಪ್ ಎನ್.ಆರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಘಟನೆ ನಡೆದಿದೆ. ದಿಲೀಪ್‌ ಮಂಗಳೂರಿನಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದರು. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಆಗಿರಬಹುದು ಎಂದು ಶಂಕಿಸಲಾಗಿದೆ.

ಕುಟುಂಬದ ಜೊತೆ ಮಂಗಳೂರಿನಲ್ಲಿ ಉದ್ಯಮಿ ವಾಸವಾಗಿದ್ದರು. ಕಳೆದ ತಡರಾತ್ರಿ(ಎ.29) ಈ ಘಟನೆ ನಡೆದಿದೆ. ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಸರಬರಾಜು ಮಾಡಿಲ್ಲ ಎಂದ ಟರ್ಕಿ..! ಟರ್ಕಿಗೆ ಭೂಕಂಪ ಸಂದರ್ಭದಲ್ಲಿ ಭಾರೀ ಪ್ರಮಾಣದ ಸಹಾಯ ಮಾಡಿದ್ದ ಭಾರತ..!

See also  ಅರಂಬೂರು: ಅಪರಿಚಿತ ವ್ಯಕ್ತಿ ಬಸ್ ಸ್ಟ್ಯಾಂಡ್ ಬಳಿ ಸಾವು, ಈತನ ಮನೆಯವರಿಗೆ ವಿಷಯ ಮುಟ್ಟಿಸುವಿರಾ..?
  Ad Widget   Ad Widget     Ad Widget   Ad Widget   Ad Widget   Ad Widget