ನ್ಯೂಸ್ ನಾಟೌಟ್ : ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯ ಚೂರಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಉಡುಪಿಯ ಮಣಿಪಾಲದ ಈಶ್ವರನಗರ ಸಮೀಪ ಇಂದು(ಡಿ.6) ಬೆಳಗ್ಗೆ ನಡೆದಿದೆ.
ಮೃತರನ್ನು ಕಾಸರಗೋಡಿನ ಶ್ರೀಧರ್ ನಾಯಕ(35) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದು, ಇವರ ಕುತ್ತಿಗೆಯನ್ನು ಬಿಯರ್ ಬಾಟಲಿಯಿಂದ ಕೊಯ್ದು ಹತ್ಯೆ ಮಾಡಿರುವುದು ತಿಳಿದುಬಂದಿದೆ. ಕೊಲೆ ಯಾವ ಕಾರಣಕ್ಕೆ ನಡೆದಿದೆ ಮತ್ತು ಯಾರು ಮಾಡಿದ್ದಾರೆ ಎಂಬುದು ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್, ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.