Latestದೇಶ-ವಿದೇಶಸಿನಿಮಾ

ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಕಿಂಗ್​ ಸ್ಟಾರ್ ಯಶ್..! ರಾವಣ ಸಿನಿಮಾ ಶೂಟಿಂಗ್ ಗೆ ತಯಾರಿ

2.4k

ನ್ಯೂಸ್‌ ನಾಟೌಟ್‌: ರಾಕಿಂಗ್​ ಸ್ಟಾರ್​ ಯಶ್​​ ನಟನೆಯ ಸಿನಿಮಾವೊಂದು ಶೂಟಿಂಗ್ ಗೆ ತಯಾರಿ ನಡೆಯುತ್ತಿದೆ, ರಾವಣನಾಗಿ ಮಿಂಚಲು ಸಜ್ಜಾಗಿದ್ದಾರೆ. ಈ ಮಧ್ಯೆ ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯಕ್ಕೆ ನಟ ಯಶ್​ ಭೇಟಿ ಕೊಟ್ಟಿದ್ದಾರೆ.

ನಟ ಯಶ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಯಾವುದೇ ಕೆಲಸ ಶುರು ಮಾಡುವ ಮೊದಲು ದೇವರಿಗೆ ವಿಶೇಷವಾದ ಪ್ರಾರ್ಥನೆ ಸಲ್ಲಿಸುತ್ತಾರೆ. ಹೀಗಾಗಿ, ‘ರಾಮಾಯಣ’ ಸಿನಿಮಾದ ಶೂಟ್​ಗೂ ಮೊದಲು ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ನಾಳೆ(ಎ.22) ರಾಮಾಯಾಣ 2 ಸಿನಿಮಾದ ಶೂಟಿಂಗ್ ಆರಂಭಗೊಳ್ಳಲಿದೆ. ಹೀಗಾಗಿ ಶೂಟಿಂಗ್ ಆರಂಭಕ್ಕೂ ಪ್ರಾರಂಭಿಸುವ ಮೊದಲು ನಟ ಮಹಾಕಾಳೇಶ್ವರ ದೇವಸ್ಥಾನಕ್ಕೆ ಹೋಗಿ ವಿಶೇಷವಾಗಿ ಪೂಜೆ ಸಲ್ಲಸಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಟಾಕ್ಸಿಕ್ ಸಿನಿಮಾದ ಮಧ್ಯೆ ರಾಮಾಯಣ ಚಿತ್ರೀಕರಣದಲ್ಲಿ ನಟ ಯಶ್​ ಭಾಗಿಯಾಗಲಿದ್ದಾರೆ. ಈ ಚಿತ್ರದಲ್ಲಿ ನಟ ಯಶ್​ ಕೇವಲ ಹೀರೋ ಮಾತ್ರವಲ್ಲದಲ್ಲೇ ಸಹ ನಿರ್ಮಾಪಕ ಕೂಡ ಆಗಿದ್ದಾರೆ. ಬಹು ನಿರೀಕ್ಷಿತ ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ರಾಮಾಯಣ ಚಿತ್ರದಲ್ಲಿ ಯಶ್ ರಾವಣನಾಗಿ ನಟಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್, ಹನುಮಂತನಾಗಿ ಸನ್ನಿ ದಿಯೋಲ್, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಈ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗ 2026ರ ದೀಪಾವಳಿಗೆ ಮತ್ತು ಎರಡನೇ ಭಾಗ 2027ರಲ್ಲಿ ತೆರೆಗೆ ಬರಲಿದೆ.

 

See also  ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು..! ಆರೋಗ್ಯದಲ್ಲಿ ಏರುಪೇರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget