ಕರಾವಳಿಕ್ರೈಂವೈರಲ್ ನ್ಯೂಸ್

ಉಳ್ಳಾಲದ ಯುವತಿ ದುಬೈನಲ್ಲಿ ದುರಂತ ಅಂತ್ಯ..! ಪ್ರತೀ ದಿನ ಕ್ಯಾಬ್ ನಲ್ಲಿ ಹೋಗುತ್ತಿದ್ದವಳು ಅಂದು ತಾನೇ ಕಾರು ಚಲಾಯಿಸಿದ್ದೇಕೆ..?

269

ನ್ಯೂಸ್ ನಾಟೌಟ್: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲದ ಕೋಟೆಕಾರು, ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ(28) ಎಂಬಾಕೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.

ಚಿಂತಾಜನಕ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಏಕೈಕ ಪುತ್ರಿ ವಿದಿಶಾ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬೈಗೆ ತೆರಳಿ ಅಲ್ಲಿನ ಏರ್ಪೋರ್ಟಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯ ನಿರ್ವಹಿಸಿದ್ದರು.

ಪ್ರತಿದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ(ಫೆ22) ಕ್ಯಾಬ್ ತಪ್ಪಿದ ಹಿನ್ನಲೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

See also  ವಿಟ್ಲ:ವಿದೇಶದಲ್ಲಿ ಉದ್ಯೋಗದಲ್ಲಿದ್ದ ಯುವಕ ಅನಾರೋಗ್ಯದಿಂದ ನಿಧನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget