ಕರಾವಳಿ

ಉಳ್ಳಾಲ: 12 ವರ್ಷದ ಬಾಲಕಿಯನ್ನು 6 ತಿಂಗಳ ಗರ್ಭವತಿಯನ್ನಾಗಿಸಿದವ ಅರೆಸ್ಟ್, ಒಬ್ಬಳೇ ಇದ್ದ ಸಮಯದಲ್ಲಿ ಅತ್ಯಾಚಾರ ನಡೆಸಿದ ದೂರು ದಾಖಲು..!

223

ನ್ಯೂಸ್ ನಾಟೌಟ್: 12 ವರ್ಷದ ಬಾಲಕಿಯನ್ನು ಪಕ್ಕದ ರೂಮಿಗೆ ಕರೆದೊಯ್ದು ಅತ್ಯಾಚಾರ ಮಾಡಿ ಆಕೆ ಗರ್ಭ ಧರಿಸಲು ಕಾರಣನಾದ ಆರೋಪಿ ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿ ಎಂಬಾತನನ್ನು ಮಂಗಳೂರಿನ ಮಹಿಳಾ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 8ನೇ ತರಗತಿಯಲ್ಲಿ ಕಲಿಯುತ್ತಿರುವ 12 ವರ್ಷ 10 ತಿಂಗಳು ಪ್ರಾಯದ ಬಾಲಕಿಯನ್ನು ಆರೋಪಿಯು ಆಕೆ ಒಬ್ಬಳೇ ಇದ್ದ ಸಂದರ್ಭದಲ್ಲಿಯೂ ಆಗಾಗ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಬಾಲಕಿ ಮಹಿಳಾ ಠಾಣೆಗೆ ದೂರು ನೀಡಿದ್ದಳು.

ಶನಿವಾರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರು ಮಹಿಳಾ ಠಾಣೆಯ ನಿರೀಕ್ಷಕ ಲೋಕೇಶ್ ಎ.ಸಿ. ತನಿಖೆ ನಡೆಸುತ್ತಿದ್ದಾರೆ.

See also  ಸುಳ್ಯ: ಎನ್ನೆoಪಿಯುಸಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ,ವಿಜೇತರು ಯಾರು? ಇಲ್ಲಿದೆ ವಿವರ..
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget