ಕ್ರೈಂವೈರಲ್ ನ್ಯೂಸ್

ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕಾರ..! ಪ್ರಾಧ್ಯಾಪಕಿ ಸಹಿತ 10 ಮಂದಿ ಅರೆಸ್ಟ್..!

162

ನ್ಯೂಸ್ ನಾಟೌಟ್: ಕೆಎಲ್ ಇಎಫ್ ಯುನಿವರ್ಸಿಟಿ ಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಸಹಿತ 10 ಮಂದಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯೋಲಜಿ ಪ್ರೊಫೆಸರ್ ಗಾಯತ್ರಿ ದೇವರಾಜ್ ಹಾಗೂ 10 ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ತಂಡದ ಅಧ್ಯಕ್ಷರು, ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ.

ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ವೇಳೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್‌ ಟಾಪ್‌ ಗಳು, ಐಫೋನ್ 16 ಪ್ರೊ, ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

Click

See also  ರಾತ್ರಿ ಹಿಂದೂಗಳ ಮನೆಗೆ ನುಗ್ಗಿ ಮುಸ್ಲಿಂ ಯುವಕರ ದಾಂಧಲೆ..! ಗ್ರಾಮಸ್ಥರಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget