ಕರಾವಳಿಪುತ್ತೂರು

ಉಪ್ಪಿನಂಗಡಿ:1 ತಿಂಗಳ ಮಗು ಸಹಿತ ಇಬ್ಬರು ಮಕ್ಕಳನ್ನ ಬಿಟ್ಟು ಅಪ್ಪ-ಅಮ್ಮ ನಾಪತ್ತೆ,ಹೆತ್ತವರಿಗೆ ಕರುಳಿನ ಕೂಗು ಕೇಳಿಸದೇ?

251

ನ್ಯೂಸ್‌ ನಾಟೌಟ್‌: ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ದಂಪತಿ ಅನಾಥವಾಗಿ ಬಿಟ್ಟು ಹೋದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕರಾಯ ಗ್ರಾಮದಲ್ಲಿ ನಡೆದಿತ್ತು.ಮಕ್ಕಳ ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿತ್ತಾದರೂ,ಹೆತ್ತವರು ಇನ್ನೂ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ.ತಬ್ಬಲಿಯಾದ ಮಕ್ಕಳು ಇದೀಗ ಪುತ್ತೂರಿನ ಆಶ್ರಮದಲ್ಲಿದ್ದಾರೆ.

ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡಿದ್ದರು. ಮದ್ಯ ವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು. ಈ ಎರಡು ಮಕ್ಕಳನ್ನು ಜೂ. 2ರಂದು ಕರಾಯ ಗ್ರಾಮದ ಫಾತಿಮಾ ಎಂಬವರ ಮನೆಯಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಈ ದಂಪತಿ ತಿಳಿಸಿದ್ದರು. ಆದರೆ 2 ದಿನ ಕಳೆದರೂ ಹೆತ್ತವರು ಕಾಣಿಸಿಕೊಳ್ಳದೆ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಲಾಗಿತ್ತು.

ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ ಮೂರು ದಿನವಾದರೂ ವಾಪಾಸ್‌ ಬಾರದಿದ್ದನ್ನು ಗಮನಿಸಿದ ಫಾತಿಮಾ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿ, ಮಕ್ಕಳನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗಿರುವ ದಂಪತಿಯನ್ನು ಪತ್ತೆ ಹಚ್ಚುವಂತೆ ದೂರಿನಲ್ಲಿ ಉಲ್ಲೇಖಿಸಿದ್ದರು. ಬಳಿಕ ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ ಒಪ್ಪಿಸಿದ್ದರು.

See also  ಮಂಗಳೂರು: ಅಂಗನವಾಡಿ ಮಕ್ಕಳಿಗೆ ಸರ್ಕಾರ ಮತ್ತೆ ಪೂರೈಸಿತು ಕೊಳೆತ ಮೊಟ್ಟೆ..! ಮೊಟ್ಟೆ ಒಯ್ದಿದ್ದ ಗರ್ಭಿಣಿಯರು, ಬಾಣಂತಿಯರ ಕುಟುಂಬಸ್ಥರಿಂದ ಬೈಗುಳ ಸುರಿಮಳೆ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಏನು ಹೇಳ್ತಾರೆ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget